-->
ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿ: ಸಿದ್ದರಾಮಯ್ಯ ಮಹತ್ವದ ಆದೇಶ

ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿ: ಸಿದ್ದರಾಮಯ್ಯ ಮಹತ್ವದ ಆದೇಶ

ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿ: ಸಿದ್ದರಾಮಯ್ಯ ಮಹತ್ವದ ಆದೇಶ

ರಾಜ್ಯದಲ್ಲಿ 2006 ಏಪ್ರಿಲ್‌ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ.


ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಈ ಆದೇಶದಿಂದ ಎಲ್ಲಾ 13,000 ಎನ್.ಪಿ.ಎಸ್ ನೌಕರರ ಕುಟುಂಬಗಳಿಗೆ ರಾಜ್ಯ ಸರ್ಕಾರದ ಈ ನಿರ್ಧಾರ ನೆಮ್ಮದಿ ನೀಡಿದೆ ಎಂದು ಭಾವಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.


ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೆ, ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ ಎಂದು ಅವರು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ನೀಡಿದ ಹೇಳಿಕೆಯಲ್ಲಿ ಘೋಷಿಸಿದ್ದಾರೆ.Ads on article

Advertise in articles 1

advertising articles 2

Advertise under the article