-->
ನೋಟರಿ ನೇಮಕಾತಿ ಅರ್ಜಿಗಳನ್ನು ಸಕಾರಣವಿಲ್ಲದೆ ತಿರಸ್ಕರಿಸಲಾಗದು: ಹೈಕೋರ್ಟ್‌ ಮಹತ್ವದ ತೀರ್ಪು

ನೋಟರಿ ನೇಮಕಾತಿ ಅರ್ಜಿಗಳನ್ನು ಸಕಾರಣವಿಲ್ಲದೆ ತಿರಸ್ಕರಿಸಲಾಗದು: ಹೈಕೋರ್ಟ್‌ ಮಹತ್ವದ ತೀರ್ಪು

ನೋಟರಿ ನೇಮಕಾತಿ ಅರ್ಜಿಗಳನ್ನು ಸಕಾರಣವಿಲ್ಲದೆ ತಿರಸ್ಕರಿಸಲಾಗದು: ಹೈಕೋರ್ಟ್‌ ಮಹತ್ವದ ತೀರ್ಪು

ನೋಟರಿ ವಕೀಲರಾಗಿ ನೇಮಕಾತಿ ಕೋರಿ ಸಲ್ಲಿಸಲಾಗುವ ಅರ್ಜಿಗಳನ್ನು ಸಕಾರಣವಿಲ್ಲದೆ ತಿರಸ್ಕರಿಸಲಾಗದು ಎಂದು ಕೇರಳ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.


ನೋಟರಿ ನಿಯಮಗಳು 1956 ರ ನಿಯಮ 8(1)(ಸಿ) ಅಡಿಯಲ್ಲಿ ನೋಟರಿ ಹುದ್ದೆಗೆ ನೇಮಕಾತಿಗಾಗಿ ವಕೀಲರು ಅರ್ಜಿಗಳನ್ನು ಸಲ್ಲಿಸುತ್ತಾರೆ. ಆದರೆ, ಈ ಅರ್ಜಿಗಳನ್ನು ಸೂಕ್ತ ಕಾರಣವಿಲ್ಲದೆ ತಿರಸ್ಕರಿಸಲಾಗದು ಎಂದು ನ್ಯಾಯಪೀಠ ಹೇಳಿದೆ.


ನ್ಯಾ. ದೇವನ್ ರಾಮಚಂದ್ರನ್ ಅವರಿದ್ದ ನ್ಯಾಯಪೀಠ ಈ ಆದೇಶವನ್ನು ಹೊರಡಿಸಿದ್ದು, ಅರ್ಜಿದಾರರೂ ಆಗಿರುವ ವಕೀಲರು ನೋಟರಿ ನೇಮಕಾತಿ ಬಯಸಿ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸುವುದಕ್ಕೆ ಸೂಕ್ತ ಕಾರಣ ನೀಡಬೇಕೆಂದು ಅಭಿಯೋಜನ ಇಲಾಖೆಗೆ ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.


ಅರ್ಜಿದಾರರು ವಕೀಲರಾಗಿದ್ದು, ನೋಟರಿ ನೇಮಕಾತಿ ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ, ಕಾನೂನು ಇಲಾಖೆ ಈ ಅರ್ಜಿಯನ್ನು ತಿರಸ್ಕರಿಸಿತ್ತು.


ಇದನ್ನು ಹಿಂಬರಹವನ್ನು ಪ್ರಶ್ನಿಸಿ, ಅರ್ಜಿದಾರರು ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ ವಿರುದ್ಧ ಮಾನ್ಯ ನ್ಯಾಯಪೀಠದಿಂದ ನಿರ್ದೇಶನಗಳನ್ನು ಕೋರಿದ್ದರು.


ಈ ವಕೀಲರೊಬ್ಬರು ಸಲ್ಲಿಸಿದ ಅರ್ಜಿಯನ್ನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿಯನ್ನು ಪುರಸ್ಕರಿಸಿದೆ. ನೋಟರಿ ಆಯ್ಕೆಗಾಗಿ ವಕೀಲರು ಸಲ್ಲಿಸಿದ ಅರ್ಜಿಯನ್ನು ಮಾನ್ಯ ಕಾರಣಗಳನ್ನು ದಾಖಲಿಸದೆಯೇ ತಿರಸ್ಕರಿಸಲಾಗುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.Ads on article

Advertise in articles 1

advertising articles 2

Advertise under the article