-->
45 ವಕೀಲರ ಮೇಲೆ ಸುಳ್ಳು ಪ್ರಕರಣ: ಎಸ್‌ಐ ಅಮಾನತಿಗೆ ಒತ್ತಾಯಿಸಿ ರಾಮನಗರದಲ್ಲಿ ಪ್ರತಿಭಟನೆ, ರಾಜ್ಯಾದ್ಯಂತ ವಕೀಲರಿಂದ ಹೋರಾಟ

45 ವಕೀಲರ ಮೇಲೆ ಸುಳ್ಳು ಪ್ರಕರಣ: ಎಸ್‌ಐ ಅಮಾನತಿಗೆ ಒತ್ತಾಯಿಸಿ ರಾಮನಗರದಲ್ಲಿ ಪ್ರತಿಭಟನೆ, ರಾಜ್ಯಾದ್ಯಂತ ವಕೀಲರಿಂದ ಹೋರಾಟ

45 ವಕೀಲರ ಮೇಲೆ ಸುಳ್ಳು ಪ್ರಕರಣ: ಎಸ್‌ಐ ಅಮಾನತಿಗೆ ಒತ್ತಾಯಿಸಿ ರಾಮನಗರದಲ್ಲಿ ವಕೀಲರ ಪ್ರತಿಭಟನೆ, ರಾಜ್ಯಾದ್ಯಂತ ವಕೀಲರಿಂದ ಹೋರಾಟ





ರಾಮನಗರ ಜಿಲ್ಲಾ ವಕೀಲರ ಸಂಘದ 45 ಮಂದಿ ವಕೀಲರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿರುವ ಐಜೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ತನ್ವೀರ್ ಹುಸೈನ್‌ ಅವರನ್ನು ಅಮಾನತು ಮಾಡಬೇಕು ಎಂದು ವಕೀಲರು ಹೋರಾಟ ನಡೆಸಿದ್ದಾರೆ.


ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ವಕೀಲರು ರಾಮನಗರ ವಕೀಲರ ಹೋರಾಟಕ್ಕೆ ಬೆಂಬಲ ನೀಡಿದ್ದು, ರಾತ್ರಿಯಿಡೀ ಮುಂದುವರಿದ ವಕೀಲರ ಹೋರಾಟವನ್ನು ನಿಯಂತ್ರಿಸಲು ಸಾವಿರಾರು ಪೊಲೀಸರನ್ನು ನಿಯೋಜಿಸಲಾಗಿದೆ.





ಧರಣಿ ಮೇಲೆ ನಿಗಾ ಇಡಲು 100 ಬಾಡಿ ಕ್ಯಾಮರಾ, 2 ಡ್ರೋನ್, 40 ಹ್ಯಾಂಡಿ ಕ್ಯಾಮ್‌ ಹಾಗೂ ಜಿಲ್ಲಾಧಿಕಾರಿ ಸುತ್ತಮುತ್ತ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


ಧರಣಿಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲು ಡಿವೈಎಸ್‌ಪಿಗಳು, ಇನ್ಸ್‌ಪೆಕ್ಟರ್‌ಗಳು, ಪಿಎಸ್‌ಐಗಳು, ಕಾನ್ಸ್‌ಟೆಬಲ್‌ಗಳು ಸೇರಿದಂತೆ ಸಾವಿರಕ್ಕೂ ಅಧಿಕ ಪೊಲೀಸರು ಪಹರೆ ಕಾಯುತ್ತಿದ್ದಾರೆ.


ಧರಣಿಯಲ್ಲಿ ರಾಜ್ಯ ವಕೀಲರ ಪರಿಷತ್ತು ಅಧ್ಯಕ್ಷ ವಿಶಾಲ್ ರಘು, ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ. ರಂಗನಾಥ್ ಸೇರಿದಂತೆ ವಕೀಲರ ಸಂಘದ ಮುಖಂಡರು, ಪದಾಧಿಕಾರಿಗಳು ಪಾಲ್ಗೊಂಡಿದ್ದಾರೆ.






Ads on article

Advertise in articles 1

advertising articles 2

Advertise under the article