-->
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ. ಅಂಜಾರಿಯಾ ನೇಮಕ

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ. ಅಂಜಾರಿಯಾ ನೇಮಕ

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ. ಅಂಜಾರಿಯಾ ನೇಮಕ





ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.



ಕಾನೂನು ಮತ್ತು ನ್ಯಾಯ ಸಚಿವಾಲಯದ ಸ್ವತಂತ್ರ ಉಸ್ತುವಾರಿ ಹೊಂದಿರುವ ಕೇಂದ್ರ ಸಂಪುಟದ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಈ ಸುದ್ದಿಯನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.



ಕಳೆದ ಫೆಬ್ರವರಿ 7ರಂದು ಸುಪ್ರೀಂ ಕೋರ್ಟ್ ಕೊಲೀಜಿಯಂ ನ್ಯಾ. ಅಂಜಾರಿಯ ಅವರನ್ನು ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸ್ಸು ಮಾಡಿತ್ತು.



ಹಾಲಿ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರು ಫೆಬ್ರವರಿ 24ರಂದು ನಿವೃತ್ತರಾದ ನಂತರ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.



2011 ನವೆಂಬರ್ 21ರಂದು ಅಂಜಾರಿಯ ಅವರು ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.


ಈ ಹುದ್ದೆಗೇರುವ ಮೊದಲು ಅವರು ಗುಜರಾತ್ ಹೈಕೋರ್ಟ್ ನಲ್ಲಿ ಸಿವಿಲ್, ಸಾಂವಿಧಾನಿಕ ವಿಷಯ, ಕಂಪನಿ ಕಾನೂನು, ಕಾರ್ಮಿಕ ಮತ್ತು ಸೇವಾ ವಿಷಯಗಳಲ್ಲಿ ವೃತ್ತಿಪರ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದರು.

Ads on article

Advertise in articles 1

advertising articles 2

Advertise under the article

  

  

  

Join our WhatsApp Channel Powered By : Online Pudu