-->
ಖಾಸಗಿ ವ್ಯಕ್ತಿಗಳು ಸರ್ಕಾರಿ ಲಾಂಛನ ಬಳಸಬಹುದೇ..?: ಕರ್ನಾಟಕ ಹೈಕೋರ್ಟ್‌

ಖಾಸಗಿ ವ್ಯಕ್ತಿಗಳು ಸರ್ಕಾರಿ ಲಾಂಛನ ಬಳಸಬಹುದೇ..?: ಕರ್ನಾಟಕ ಹೈಕೋರ್ಟ್‌

ಖಾಸಗಿ ವ್ಯಕ್ತಿಗಳು ಸರ್ಕಾರಿ ಲಾಂಛನ ಬಳಸಬಹುದೇ..?: ಕರ್ನಾಟಕ ಹೈಕೋರ್ಟ್‌





ಸರ್ಕಾರಗಳ ಅಧಿಕೃತ ಲಾಂಛನ ಮತ್ತು ಚಿಹ್ನೆಗಳನ್ನು ಖಾಸಗಿ ವ್ಯಕ್ತಿಗಳು ದುರ್ಬಳಕೆ ಮಾಡುತ್ತಿರುವುದನ್ನು ತಡೆಯಲು ಈಗಾಗಲೇ ಇರುವ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್‌, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ನೋಟೀಸ್ ಜಾರಿಗೊಳಿಸಿದೆ.



ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ದಾಖಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎನ್. ವಿ. ಅಂಜಾರಿಯಾ ಹಾಗೂ ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನೋಟೀಸ್ ಜಾರಿ ಮಾಡಿ ಆದೇಶ ಹೊರಡಿಸಿದೆ.



ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದವನ್ನು ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವಾಲಯದ ನಿರ್ದೇಶಕರು, ಹೆದ್ದಾರಿ ಸಚಿವಾಲಯ, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯದ ನಿರ್ದೇಶಕರಿಗೆ ನೋಟೀಸ್ ಜಾರಿಗೊಳಿಸಿದ್ದು, ವಿಚಾರಣೆಯನ್ನು ಮುಂದೂಡಿದೆ.


ಖಾಸಗಿ ವ್ಯಕ್ತಿಗಳು, ಸಂಘ - ಸಂಸ್ಥೆಗಳು ತಮ್ಮ ವಾಹನಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂವಿಧಾನಿಕ ಸಂಸ್ಥೆಗಳ ಹೆಸರು, ಲಾಂಛನ ಮತ್ತು ಚಿಹ್ನೆಗಳನ್ನು ಅಳವಡಿಸಿಕೊಳ್ಳುತ್ತಿರುವ ಬಗ್ಗೆ ಹೈಕೋರ್ಟ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.


ಇದಕ್ಕೆ ಸಂಬಂಧಿಸಿದಂತೆ, ಈಗಿರುವ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಲ್ಲಿ ಲೋಪವಾಗಿದೆ ಎಂದು ಅದು ಅಭಿಪ್ರಾಯ ವ್ಯಕ್ತಪಡಿಸಿತ್ತು. ಈ ಸಂಬಂಧ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ದಾವೆಯನ್ನು ದಾಖಲಿಸಲು ನ್ಯಾ. ಆರ್. ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಹೈಕೋರ್ಟ್ ಕಾನೂನು ಸೇವೆಗಳ ಸಮಿತಿಗೆ ನಿರ್ದೇಶನ ನೀಡಿತ್ತು. ಈ ನಿರ್ದೇಶನದ ಪ್ರಕಾರ ಈ ಐಪಿಎಲ್ ಅರ್ಜಿ ದಾಖಲಾಗಿತ್ತು.


ರಾಷ್ಟ್ರ ಲಾಂಛನ ಮತ್ತು ಹೆಸರು (ಅನುಚಿತ ಬಳಕೆ ನಿಷೇಧ) ಅಧಿನಿಯಮ- 1950

ಲಾಂಛನ ಮತ್ತು ಹೆಸರು (ಅನುಚಿತ ಬಳಕೆ ನಿಷೇಧ) ನಿಯಮಗಳು- 1982

ಭಾರತದ ರಾಷ್ಟ್ರ ಲಾಂಛನ (ಅನುಚಿತ ಬಳಕೆ ನಿಷೇಧ) ಕಾಯ್ದೆ- 2005

ರಾಷ್ಟ್ರ ಲಾಂಛನ (ಬಳಕೆ ನಿಯಂತ್ರಣ) ನಿಯಮಗಳು- 2007 ಮತ್ತು 2010

ಕರ್ನಾಟಕ ಮೋಟಾರು ವಾಹನ ಅಧಿನಿಯಮದ ನಿಯಮ 145(a)

ಕೇಂದ್ರ ಮೋಟಾರು ವಾಹನ ಅಧಿನಿಯಮದ ನಿಯಮ 50 ಮತ್ತು 51


ಈ ಮೇಲಿನ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಕೋರಿ ಈ ಸಾರ್ವಜನಿಕ ಹಿತಾಸಕ್ತಿ ದಾವೆಯನ್ನು ದಾಖಲಿಸಲಾಗಿತ್ತು.


Ads on article

Advertise in articles 1

advertising articles 2

Advertise under the article