ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನೂತನ ಮುಖ್ಯಸ್ಥರಾಗಿ ಹಿರಿಯ ನ್ಯಾಯಮೂರ್ತಿ ಕೆ. ಸೋಮಶೇಖರ್
Wednesday, March 6, 2024
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನೂತನ ಮುಖ್ಯಸ್ಥರಾಗಿ ಹಿರಿಯ ನ್ಯಾಯಮೂರ್ತಿ ಕೆ. ಸೋಮಶೇಖರ್
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನೂತನ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಕೆ. ಸೋಮಶೇಖರ್ ಅವರನ್ನು ನೇಮಕ ಮಾಡಲಾಗಿದೆ.
ಗೌರವಾನ್ವಿತ ರಾಜ್ಯಪಾಲ ಶ್ರೀ ತಾವರ್ ಚಂದ್ ಗೆಹ್ಲೊಟ್ ಫೆಬ್ರವರಿ 25ರಿಂದ ಪೂರ್ವಾನ್ವಯವಾಗುವಂತೆ ನ್ಯಾ. ಸೋಮಶೇಖರ್ ಅವರನ್ನು ಈ ಮೇಲಿನ ಹುದ್ದೆಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಕಾಯ್ದೆ 1987ರ ಸೆಕ್ಷನ್ 6 (2) B ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿಯಮಗಳು 1996ರ ಪ್ರಕಾರ ದೊರೆತಿರುವ ಅಧಿಕಾರವನ್ನು ಬಳಸಿ ಈ ನೇಮಕ ಮಾಡಲಾಗಿದೆ.
ಫೆಬ್ರವರಿ 25ರಿಂದ ಪೂರ್ವಾನ್ವಯವಾಗುವಂತೆ ಈ ಆದೇಶ ಹೊರಡಿಸಲಾಗಿದೆ ಎಂದು ರಾಜ್ಯಭವನದ ಪ್ರಕಟಣೆ ತಿಳಿಸಿದೆ.