-->
ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಕದತಟ್ಟಿದ ಕರ್ನಾಟಕ: ಆರು ತಿಂಗಳಾದ್ರೂ ಬರ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ದೂರು ಸಲ್ಲಿಕೆ

ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಕದತಟ್ಟಿದ ಕರ್ನಾಟಕ: ಆರು ತಿಂಗಳಾದ್ರೂ ಬರ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ದೂರು ಸಲ್ಲಿಕೆ

ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಕದತಟ್ಟಿದ ಕರ್ನಾಟಕ: ಆರು ತಿಂಗಳಾದ್ರೂ ಬರ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ದೂರು ಸಲ್ಲಿಕೆ





ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿದ್ದಾರೆ. ಆರು ತಿಂಗಳಾದರೂ ಬರ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್‌ಗೆ ದೂರು ಅರ್ಜಿ ಸಲ್ಲಿಸಿದ್ದಾರೆ.


ಎನ್‌ಡಿಆರ್‌ಎಫ್‌ನಿಂದ ರಾಜ್ಯ ಸರ್ಕಾರಕ್ಕೆ 18,171.44 ಕೋಟಿ ರೂಪಾಯಿ ಆರ್ಥಿಕ ನೆರವು ಕೋರಲಾಗಿತ್ತು. ರಾಜ್ಯದಲ್ಲಿ ಬರದಿಂದಾಗಿ 35162.05 ಕೋಟಿ ರೂ. ಮೌಲ್ಯದ ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ ಎಂಬುದನ್ನು ಕರ್ನಾಟಕ ತನ್ನ ದೂರು ಅರ್ಜಿಯಲ್ಲಿ ತಿಳಿಸಿದೆ.


ರಾಜ್ಯವು ತೀವ್ರ ಬರದಿಂದ ಸಂಕಷ್ಟಕ್ಕೆ ಸಿಲುಕಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ಆರ್ಥಿಕ ನೆರವು ಬಿಡುಗಡೆ ಮಾಡಲು ಕೇಂದ್ರದ ಗೃಹ ಇಲಾಖೆಗೆ ನಿರ್ದೇಶಿಸಬೇಕು ಎಂದು ಕರ್ನಾಟಕ ಸಲ್ಲಿಸಿದ ಅರ್ಜಿಯಲ್ಲಿ ಕೋರಲಾಗಿದೆ.


ರಾಜ್ಯದ ಜನರ ಬಗ್ಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತಾತ್ಸಾರ ಮನೋಭಾವನೆ ಹೊಂದಿದೆ. ಬರದಿಂದ ಕಂಗೆಟ್ಟ ಕರ್ನಾಟಕಕ್ಕೆ ಬಿಜೆಪಿ ಸರ್ಕಾರ ಸೂಕ್ತ ಪರಿಹಾರ ಕೊಡುತ್ತಿಲ್ಲ. ನೆರವಿಗೂ ಬರುತ್ತಿಲ್ಲ. ಹಾಗಾಗಿ, ನಾವು ಕಾನೂನು ಹೋರಾಟ ನಡೆಸಿದ್ದೇವೆ ಎಂದು ರಾಜ್ಯ ಸರ್ಕಾರ ಹೇಳಿದೆ.


ಬರ ಸೇರಿದಂತೆ ಅಗತ್ಯ, ತುರ್ತು ಸಂದರ್ಭಗಳಲ್ಲಿ ಜನರಿಗೆ ಕ್ಷಿಪ್ರ ಗತಿಯಲ್ಲಿ ಸ್ಪಂದಿಸಬೇಕು ಎನ್ನುವ ಉದ್ದೇಶದಿಂದಲೇ ವಿಪತ್ತು ನಿರ್ವಹಣಾ ಕಾನೂನು ಮಾಡಲಾಗಿದೆ. ಆದರೆ, ಐದು ತಿಂಗಳು ಕಳೆದರೂ ಎನ್‌ಡಿಆರ್‌ಎಫ್‌ ನಿಧಿಯಿಂದ ಹಣ ಬಂದಿಲ್ಲ. ಬೇರೆ ದಾರಿ ಇಲ್ಲದೆ ನಾವು ಸುಪ್ರೀಂ ಕೋರ್ಟ್‌ ಬಾಗಿಲು ಬಡಿಯಬೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಆದರೆ, ಸರ್ಕಾರ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ನಾಯಕ ಆರ್. ಅಶೋಕ್ ಹೇಳಿದ್ದಾರೆ.


Ads on article

Advertise in articles 1

advertising articles 2

Advertise under the article