-->
ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆ: ನ್ಯಾಯಾಂಗ ವಿಚಾರಣೆ ಸಹಿತ ಎಲ್ಲ ಕಲಾಪ ವೀಡಿಯೋ ಚಿತ್ರೀಕರಣ ಕಡ್ಡಾಯ: ಹೈಕೋರ್ಟ್ ನಿರ್ದೇಶನ

ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆ: ನ್ಯಾಯಾಂಗ ವಿಚಾರಣೆ ಸಹಿತ ಎಲ್ಲ ಕಲಾಪ ವೀಡಿಯೋ ಚಿತ್ರೀಕರಣ ಕಡ್ಡಾಯ: ಹೈಕೋರ್ಟ್ ನಿರ್ದೇಶನ

ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆ: ನ್ಯಾಯಾಂಗ ವಿಚಾರಣೆ ಸಹಿತ ಎಲ್ಲ ಕಲಾಪ ವೀಡಿಯೋ ಚಿತ್ರೀಕರಣ ಕಡ್ಡಾಯ: ಹೈಕೋರ್ಟ್ ನಿರ್ದೇಶನ





ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿರುದ್ಧದ ದೌರ್ಜನ್ಯ ತಡೆ ಕಾಯಿದೆ ಗೆ ಸಂಬಂಧಿಸಿದಂತೆ ಪ್ರಕರಣಗಳ ಕುರಿತು ನಡೆಯುವ ನ್ಯಾಯಾಂಗ ವಿಚಾರಣೆ ಸೇರಿದಂತೆ ಎಲ್ಲಾ ಕಲಾಪಗಳ ವಿಡಿಯೋ ಚಿತ್ರೀಕರಣ ಮಾಡುವುದು ಕಡ್ಡಾಯ ಎಂದು ಬಾಂಬೆ ಹೈಕೋರ್ಟ್ ಆದೇಶ ನೀಡಿದೆ.


ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿಕೆ ಉಪಾಧ್ಯಾಯ ಹಾಗೂ ಅವರಿಂದ ವಿಭಾಗಿಯ ನ್ಯಾಯ ಪೀಠ ಈ ಆದೇಶ ನೀಡಿದೆ.


ವಿಚಾರಣೆಯ ವಿಡಿಯೋ ಚಿತ್ರೀಕರಣವನ್ನು ಕಡ್ಡಾಯಗೊಳಿಸುವ ಈ ಕಾಯ್ದೆಯ ಸೆಕ್ಷನ್ 15ಎ(10) ನ್ಯಾಯಾಲಯದಲ್ಲಿ ನಡೆಯುವ ವಿಚಾರಣೆಗಳಿಗೂ ಅನ್ವಯಿಸುತ್ತದೆ ಎಂದು ನ್ಯಾಯಪೀಠ ಹೇಳಿದೆ.


ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ 15ಎ(10) ಕೈಪಿಡಿಯಲ್ಲ. ಅದು ಕಡ್ಡಾಯ ಎಂಬುದನ್ನು ಸ್ಪಷ್ಟಪಡಿಸುತ್ತೇವೆ. ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಗೆ ಸಂಬಂಧಿಸಿದ ಯಾವುದೇ ವಿಚಾರಣೆ ಇರಲಿ ಅದರ ವಿಡಿಯೋ ಚಿತ್ರೀಕರಣ ನಡೆಸುವುದು ಅಗತ್ಯ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.


ಪ್ರಕರಣದ ಸಂತ್ರಸ್ತರು ಹಾಗೂ ಸಾಕ್ಷಿಗಳಿಗೆ ಆ ಪ್ರಕರಣದ ಕುರಿತು ಮಾಹಿತಿ ನೀಡಬೇಕು. ಇದರಿಂದ ವಿಚಾರಣೆಗೆ ಸಿದ್ಧತೆ ಮಾಡಿ ಕೊಡಲು ಅವರಿಗೆ ಅನುಕೂಲವಾಗಲಿದೆ. ಸಂತ್ರಸ್ತರು ಹಾಗೂ ಅವರ ಅವಲಂಬಿತರಿಗೆ ಕಾನೂನು ನೆರವು ನೀಡುತ್ತಿರುವ ಸಂಘಟನೆಗಳು ಮತ್ತು ವ್ಯಕ್ತಿಗಳಿಗೂ ಪ್ರಕರಣದ ಕುರಿತು ಮಾಹಿತಿ ಒದಗಿಸಬೇಕು ಎಂದು ನ್ಯಾಯಪೀಠ ಹೇಳಿದೆ.


2019ರಲ್ಲಿ ಡಾ. ಪಾಯಲ್ ತಡವಿ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಪಾಯಲ್ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿರುವ ಆರೋಪ ಎದುರಿಸುತ್ತಿರುವ ವೈದ್ಯರಾದ ಹೇಮಾ ಅಹುಜ, ಭಕ್ತಿ ಮೆಹರೆ ಹಾಗೂ ಅಂಕಿತ್ ಖಂಡೇಲ್ ವಾಲ್ ಅವರು ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆಯ ವೇಳೆ ವಿಭಾಗೀಯ ನ್ಯಾಯ ಪೀಠ ಈ ಆದೇಶ ನೀಡಿದೆ.



Ads on article

Advertise in articles 1

advertising articles 2

Advertise under the article