ನಕಲಿ ಜಾತಿ ಪ್ರಮಾಣಪತ್ರ ಪಡೆದು ಸರ್ಕಾರದ ಯೋಜನೆಗಳ ಪ್ರಯೋಜನ ಪಡೆದವರ ವಿರುದ್ಧ ಕ್ರಮ: ಹೈಕೋರ್ಟ್‌ಗೆ ಕರ್ನಾಟಕ ಸರ್ಕಾರ ಮಾಹಿತಿ
Wednesday, April 3, 2024
ನಕಲಿ ಜಾತಿ ಪ್ರಮಾಣಪತ್ರ ಪಡೆದು ಸರ್ಕಾರದ ಯೋಜನೆಗಳ ಪ್ರಯೋಜನ ಪಡೆದವರ ವಿರುದ್ಧ ಕ್ರಮ: ಹೈಕೋರ್ಟ್‌ಗೆ ಕರ್ನಾಟಕ ಸರ್ಕಾರ ಮಾಹಿತಿ
ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರದ ಯೋಜನೆಗಳನ್ನು ವಿವಿಧ ಇಲಾಖೆಗಳಿಂದ ಪಡೆದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಮಾರಪ್ಪ ನಾಯಕ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಹಾಗೂ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಈ ಮಾಹಿತಿ ನೀಡಿದೆ.
ನಕಲಿ ಪ್ರಮಾಣ ಪತ್ರ ಪಡೆದಿರುವವರ ವಿರುದ್ಧ ಈಗಾಗಲೇ ಕ್ರಮ ಆರಂಭಿಸಲಾಗಿದೆ. ಮೊದಲ ಹಂತದಲ್ಲಿ 30 ಮಂದಿಗೆ ನೋಟೀಸ್ ಜಾರಿ ಮಾಡಲಾಗಿದೆ.
ರಾಜ್ಯ ಸರ್ಕಾರದ ಈ ಕ್ರಮದಿಂದಾಗಿ ನಕಲಿ ಪ್ರಮಾಣ ಪತ್ರ ಪಡೆದು ಸರ್ಕಾರದ ವಿವಿಧ ಇಲಾಖೆಗಳಿಂದ ಪ್ರಯೋಜನ ಪಡೆದಿರುವ ಭ್ರಷ್ಟರಿಗೆ ನಡುಕ ಹುಟ್ಟಿಸಿದೆ. ಜೊತೆಗೆ ಕಾನೂನು ಕ್ರಮದ ಆತಂಕ, ಸಂಕಷ್ಟ ಎದುರಾಗಿದೆ.