ವಕೀಲರ ಸಮ್ಮೇಳದ ಹಣ ದುರ್ಬಳಕೆ: ರಾಜ್ಯ ವಕೀಲರ ಪರಿಷತ್ತು ಪದಾಧಿಕಾರಿಗಳ ವಿರುದ್ಧ ತನಿಖೆಗೆ ಹೈಕೋರ್ಟ್ ತಡೆ
Saturday, April 20, 2024
ವಕೀಲರ ಸಮ್ಮೇಳದ ಹಣ ದುರ್ಬಳಕೆ: ರಾಜ್ಯ ವಕೀಲರ ಪರಿಷತ್ತು ಪದಾಧಿಕಾರಿಗಳ ವಿರುದ್ಧ ತನಿಖೆಗೆ ಹೈಕೋರ್ಟ್ ತಡೆ
ಮೈಸೂರಿನಲ್ಲಿ ಕಳೆದ ವರ್ಷ ನಡೆದಿದ್ದ ರಾಜ್ಯ ಮಟ್ಟದ ವಕೀಲರ ಸಮ್ಮೇಳದಲ್ಲಿ ನಡೆದಿದೆ ಎನ್ನಲಾದ ಹಣ ದುರ್ಬಳಕೆ ಪ್ರಕರಣದ ಬಗ್ಗೆ ರಾಜ್ಯ ವಕೀಲರ ಪರಿಷತ್ತು ಪದಾಧಿಕಾರಿಗಳ ವಿರುದ್ಧ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಹಣ ದುರ್ಬಳಕೆ ಸಂಬಂಧಿಸಿದಂತೆ ಸ್ವೀಕರಿಸಿದ ದೂರಿನ ತನಿಖೆಗಾಗಿ ಮೂವರು ಸದಸ್ಯರ ಸಮಿತಿ ರಚಿಸಿ ಭಾರತೀಯ ವಕೀಲರ ಪರಿಷತ್ತು (ಬಿಸಿಐ) ಮಾಡಿರುವ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಅರ್ಜಿದಾರ ವಿಶಾಲ್ ರಘು ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ ಈ ಆದೇಶ ಹೊರಡಿಸಿದೆ.