-->
ಲೈಂಗಿಕ ದೌರ್ಜನ್ಯ ಆರೋಪ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧ ಎಫ್‌ಐಆರ್‌,ತನಿಖೆಗೆ ಎಸ್‌ಐಟಿ ರಚನೆ

ಲೈಂಗಿಕ ದೌರ್ಜನ್ಯ ಆರೋಪ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧ ಎಫ್‌ಐಆರ್‌,ತನಿಖೆಗೆ ಎಸ್‌ಐಟಿ ರಚನೆ

ಲೈಂಗಿಕ ದೌರ್ಜನ್ಯ ಆರೋಪ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧ ಎಫ್‌ಐಆರ್‌,ತನಿಖೆಗೆ ಎಸ್‌ಐಟಿ ರಚನೆ

ಮಾಜಿ ಸಚಿವ ಎಚ್.ಡಿ. ರೇವಣ್ಣ ಮತ್ತು ಅವರ ಮಗ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆಯ ಹೊಣೆಯನ್ನು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಬಿಜೊಯ್ ಕುಮಾರ್ ಸಿಂಗ್ ನೇತೃತ್ವದ ಸಿಐಡಿ ವಿಶೇಷ ತನಿಖಾ ತಂಡ (SIT)ಗೆ ವಹಿಸಲಾಗಿದೆ.


ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪವನ್ನು ಮಾಡಲಾಗಿದ್ದು, ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಸಂತ್ರಸ್ತೆಯ ದೂರು ಆಧರಿಸಿ ಐಪಿಸಿ ಸೆಕ್ಷನ್ 354A, 354D, 506, 509ರ ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ರೇವಣ್ಣ ಅವರನ್ನು ಮೊದಲನೇ ಆರೋಪಿ ಹಾಗೂ ಪ್ರಜ್ವಲ್ ಅವರನ್ನು ಎರಡನೇ ಆರೋಪಿಯನ್ನಾಗಿ ಹೆಸರಿಸಲಾಗಿದೆ.


ರೇವಣ್ಣ ಅವರು ತಮ್ಮ ಪತ್ನಿ ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದೇ ಇದ್ದಾಗ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ಅಲ್ಲದೆ, ತಮ್ಮ ಮಗಳಿಗೂ ಅಸಭ್ಯ ಸಂಭಾಷಣೆ ಮೂಲಕ ಪ್ರಚೋದನೆ ನೀಡುತ್ತಿದ್ದು, ಮಗಳು ಹೆದರಿ ನಂಬರ್ ಬ್ಲಾಕ್ ಮಾಡಿಕೊಂಡಿದ್ದಾರೆ. ಇದರಿಂದ ತಾನು ಕೆಲಸ ತೊರೆದಿರುವುದಾಗಿ ಸಂತ್ರಸ್ತೆ ತಮ್ಮ ದೂರಿನಲ್ಲಿ ಹೇಳಿದ್ಧಾರೆ.


ಪ್ರಜ್ವಲ್ ಪುರಾಣ

ಇತ್ತೀಚಿಗಷ್ಟೆ ಜಿಲ್ಲೆಯಾದ್ಯಂತ ಪ್ರಜ್ವಲ್ ರೇವಣ್ಣ ಅವರು ನಡೆಸಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಒಬ್ಬ ಮಹಿಳೆ ತನ್ನೊಂದಿಗೆ ಕೆಲಸ ಮಾಡುತ್ತಿದ್ದರು.. ಆಕೆಯೊಂದಿಗೆ ಪ್ರಜ್ವಲ್ ರೇವಣ್ಣ ನಡೆಸಿರುವ ಲೈಂಗಿಕ ದೌರ್ಜನ್ಯದ ವೀಡಿಯೋ ನೋಡಿ ಭಯವಾಗಿದ್ದು, ತನ್ನ ಗಂಡ ಕೂಡ ತನ್ನನ್ನು ಸಂಶಯದ ದೃಷ್ಟಿಯಿಂದ ನೋಡುವಂತಾಗಿದೆ.


ವೀಡಿಯೋ ಬಹಿರಂಗಗೊಂಡರೆ ಗತಿ ಏನು ಎಂದು ಅವರು ಆತಂಕ ವ್ಯಕ್ತಪಡಿಸಿದ್ಧಾರೆ. ಇದರಿಂದ ತಮಗೆ ಮಾನಸಿಕ ಹಿಂಸೆ ಆಗಿದೆ ಎಂದು ದೂರಿನಲ್ಲಿ ಮಹಿಳೆ ವಿವರಿಸಿದ್ದಾರೆ.


ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿಗೆ ವಹಿಸಿದ ಬೆನ್ನಲ್ಲೇ ಪ್ರಜ್ವಲ್ ತಂದೆ ಎಚ್.ಡಿ. ರೇವಣ್ಣ ವಿರುದ್ಧವೂ ಪ್ರಕರಣ ದಾಖಲಾಗಿದೆ.Ads on article

Advertise in articles 1

advertising articles 2

Advertise under the article