ಕರ್ನಾಟಕದ ಐವರು ನ್ಯಾಯಮೂರ್ತಿಗಳು ಖಾಯಂ: ಕೇಂದ್ರ ಸರ್ಕಾರ ಅಧಿಸೂಚನೆ
ಕರ್ನಾಟಕದ ಐವರು ನ್ಯಾಯಮೂರ್ತಿಗಳು ಖಾಯಂ: ಕೇಂದ್ರ ಸರ್ಕಾರ ಅಧಿಸೂಚನೆ
ಕರ್ನಾಟಕ ಹೈಕೋರ್ಟ್‌ನ ಐವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ಖಾಯಂಗೊಳಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ನ್ಯಾಯಮೂರ್ತಿಗಳಾದ ಸಿ.ಎಂ. ಪೂಣಚ್ಚ, ಅನಿಲ್ ಭೀಮಸೇನ ಕಟ್ಟಿ, ಚಂದ್ರಶೇಖರ್ ಮೃತ್ಯುಂಜಯ ಜೋಷಿ, ಉಮೇಶ್ ಎಂ. ಅಡಿಗ ಮತ್ತು ಟಿ.ಜಿ. ಶಿವಶಂಕರೇಗೌಡ ಅವರು ಖಾಯಂ ನ್ಯಾಯಮೂರ್ತಿಗಳಾಗಿ ನೇಮಕವಾದವರು.
ಅಧಿಕಾರ ವಹಿಸಿಕೊಳ್ಳುವ ದಿನದಿಂದ ಅನ್ವಯವಾಗುವಂತೆ ಅವರನ್ನು ಖಾಯಂಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಹೈಕೋರ್ಟ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಖಾಯಂಗೊಂಡ ನ್ಯಾಯಮೂರ್ತಿಗಳಿಗೆ ಪ್ರಮಾಣವಚನ ಬೋಧಿಸಲಿದ್ದಾರೆ ಎಂದು ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಭರತ್ ಕುಮಾರ್ ತಿಳಿಸಿದ್ದಾರೆ.
ಹೈಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿಗಳು ಸೇರಿ 51 ನ್ಯಾಯಮೂರ್ತಿಗಳಿದ್ದಾರೆ. ಸದ್ಯ ಐವರು ನ್ಯಾಯಮೂರ್ತಿಗಳು ಖಾಯಂಗೊಳಿಸಿರುವುದರಿಂದ ಒಟ್ಟು 44 ಮಂದಿ ಖಾಯಂ ನ್ಯಾಯಮೂರ್ತಿಗಳು ಹಾಗೂ ಏಳು ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳು ಇದ್ದಾರೆ.