-->
ವಿವಿಧ ಜಿಲ್ಲೆಗಳು, ಹೈಕೋರ್ಟ್ ಪೀಠದ ನ್ಯಾಯಾಧೀಶರ ವರ್ಗಾವಣೆ: ಕರ್ನಾಟಕ ಹೈಕೋರ್ಟ್ ಅಧಿಸೂಚನೆ

ವಿವಿಧ ಜಿಲ್ಲೆಗಳು, ಹೈಕೋರ್ಟ್ ಪೀಠದ ನ್ಯಾಯಾಧೀಶರ ವರ್ಗಾವಣೆ: ಕರ್ನಾಟಕ ಹೈಕೋರ್ಟ್ ಅಧಿಸೂಚನೆ

ವಿವಿಧ ಜಿಲ್ಲೆಗಳು, ಹೈಕೋರ್ಟ್ ಪೀಠದ ನ್ಯಾಯಾಧೀಶರ ವರ್ಗಾವಣೆ: ಕರ್ನಾಟಕ ಹೈಕೋರ್ಟ್ ಅಧಿಸೂಚನೆ





ಕರ್ನಾಟಕ ಹೈಕೋರ್ಟ್‌ನ ಮೂರು ಪೀಠಗಳ ವಿವಿಧ ಆರು ರಿಜಿಸ್ಟ್ರಾರುಗಳು, ಜಿಲ್ಲಾ ನ್ಯಾಯಾಧೀಶರು, ಹಿರಿಯ ಸಿವಿಲ್ ಮತ್ತು ಕಿರಿಯ ವಿಭಾಗದ ಸಿವಿಲ್ ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಪಟ್ಟಿಯನ್ನು ಕರ್ನಾಟಕ ಹೈಕೋರ್ಟ್ ಬಿಡುಗಡೆ ಮಾಡಿದೆ.


ಆಡಳಿತಾತ್ಮಕ ಮತ್ತುಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಈ ವರ್ಗಾವಣೆ ಮಾಡಲಾಗಿದೆ. ಆರು ಮಂದಿ ಜಿಲ್ಲಾ ನ್ಯಾಯಾಧೀಶರು ಮತ್ತು ಹಿರಿಯ ವಿಭಾಗದ ಸಿವಿಲ್ ನ್ಯಾಯಾಧೀಶರನ್ನು ಹೈಕೋರ್ಟ್ ಪೀಠಗಳಿಗೆ ರಿಜಿಸ್ಟ್ರಾರ್‌ಗಳಾಗಿ ನೇಮಕ ಮಾಡಲಾಗಿದೆ.


16 ಮಂದಿ ಹಿರಿಯ ಸಿವಿಲ್ ನ್ಯಾಯಾಧೀಶರಿಗೆ ತಾತ್ಕಾಲಿಕ ನೆಲೆಯಲ್ಲಿ ಜಿಲ್ಲಾ ನ್ಯಾಯಾಧೀಶರ ಪದೋನ್ನತಿ ನೀಡಲಾಗಿದೆ. 62 ಮಂದಿ ಹಿರಿಯ ಸಿವಿಲ್ ನ್ಯಾಯಾಧೀಶರಿಗೆ ವಿವಿಧೆಡೆ ವರ್ಗಾವಣೆ ಮಾಡಲಾಗಿದೆ.


112 ಮಂದಿ ಜಿಲ್ಲಾ ನ್ಯಾಯಾಧೀಶರು, 166 ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ 138 ಸಿವಿಲ್ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಎಂದು ಹೈಕೋರ್ಟ್ ಪ್ರಕಟಣೆ ತಿಳಿಸಿದೆ.


ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರಭಾವತಿ ಹಿರೇಮಠ ಅವರನ್ನು ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರನ್ನಾಗಿ ವರ್ಗಾವಣೆ ಮಾಡಲಾಗಿದೆ. ಚಿತ್ರದುರ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ. ಗೀತಾ ಅವರನ್ನು ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರನ್ನಾಗಿ ವರ್ಗಾವಣೆ ಮಾಡಲಾಗಿದೆ.


ಮಂಡ್ಯದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ. ಜೆ. ರಮಾ ಅವರನ್ನು ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಹಾಸನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ತ್ಯಾಗರಾಜ ಎನ್. ಇನವಲ್ಲಿ ಅವರನ್ನು ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರನ್ನಾಗಿ ವರ್ಗಾವಣೆ ಮಾಡಲಾಗಿದೆ.


ಬೆಂಗಳೂರು ಗ್ರಾಮಾಂತರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಾಂತವೀರ ಶಿವಪ್ಪ ಅವರನ್ನು ಹೈಕೋರ್ಟ್‌ನ ಧಾರವಾಡ ಪೀಠದ ಹೆಚ್ಚುವರಿ ರಿಜಿಸ್ಟ್ರಾರ್ ಜನರಲ್ ಆಗಿ ನೇಮಕ ಮಾಡಲಾಗಿದೆ. ಹೈಕೋರ್ಟ್‌ನ ಪ್ರಧಾನ ಪೀಠದಲ್ಲಿ ಅಧಿಕೃತ ಕರ್ತವ್ಯದಲ್ಲಿರುವ ವೆಂಕಟೇಶ್ ಆರ್. ಹುಲಗಿ ಅವರನ್ನು ಬೆಂಗಳೂರು ಪೀಠದ ಸಾಂಖ್ಯಿಕ ಮತ್ತು ಪರಿಶೀಲನಾ ರಿಜಿಸ್ಟ್ರಾರ್ ಹುದ್ದೆಗೆ, ಬೆಂಗಳೂರು ಪೀಠದ ಆಡಳಿತಾತ್ಮಕ ರಿಜಿಸ್ಟ್ರಾರ್ ಇ. ರಾಜೀವ ಗೌಡ ಅವರನ್ನು ನ್ಯಾಯಾಂಗ ರಿಜಿಸ್ಟ್ರಾರ್ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.




ಮತ್ತು 

Ads on article

Advertise in articles 1

advertising articles 2

Advertise under the article

  

  

  

Join our WhatsApp Channel Powered By : Online Pudu