-->
ಅತ್ಯಾಚಾರ ಸಂತ್ರಸ್ತೆಯ ಹೆಸರು ಬಹಿರಂಗ: ಕೇರಳ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್‌ ನಕಾರ

ಅತ್ಯಾಚಾರ ಸಂತ್ರಸ್ತೆಯ ಹೆಸರು ಬಹಿರಂಗ: ಕೇರಳ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್‌ ನಕಾರ

ಅತ್ಯಾಚಾರ ಸಂತ್ರಸ್ತೆಯ ಹೆಸರು ಬಹಿರಂಗ: ಕೇರಳ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್‌ ನಕಾರ





ಪ್ರಕರಣವೊಂದರಲ್ಲಿ ಅತ್ಯಾಚಾರ ಸಂತ್ರಸ್ತೆಯ ಹೆಸರನ್ನು ಆದೇಶದಲ್ಲಿ ಬಹಿರಂಗಪಡಿಸಿರುವ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ನಿರಾಕರಿಸಿರುವ ಕೇರಳ ಹೈಕೋರ್ಟ್‌ ಆದೇಶವನ್ನು ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿದೆ. ಈ ಮೂಲಕ ಮ್ಯಾಜಿಸ್ಟ್ರೇಟ್‌ರ ವಿರುದ್ಧ ಕ್ರಮ ಜರುಗಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.


ನ್ಯಾಯಾಂಗ ಅಧಿಕಾರಿಯ ಕಾರ್ಯಭಾರದ ಒತ್ತಡದಿಂದಾಗಿ ಹಾಗೂ ಕಣ್ತಪ್ಪಿನಿಂದಾಗಿ ಆಗಿರುವ ತಪ್ಪಾಗಿರಬಹುದು ಎಂದು ನ್ಯಾ. ಹೃಷಿಕೇಶ್ ರಾಯ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ನ್ಯಾಯಪೀಠ ತೀರ್ಪು ನೀಡಿದೆ.


ನ್ಯಾಯಾಂಗ ಅಧಿಕಾರಿಯ ವಿರುದ್ಧ ನಮಗೆ ಪ್ರತೀಕಾರದ ಭಾವನೆ ಇದೆಯೇ..? ನಾವು ಹಲವು ಪ್ರಕರಣಗಳ ವಿಚಾರಣೆ ನಡೆಸಬೇಕಿದೆ. ನಾವು ಸಹ ತಪ್ಪು ಮಾಡುತ್ತೇವೆ. ನಾವು ದಂಡ ವಿಧಿಸಬೇಕು ಎಂದು ನೀವು ಬಯಸುತ್ತೀರಾ ಎಂದು ಮ್ಯಮ್ಯಾಜಿಸ್ಟ್ರೇಟ್‌ರ ವಿರುದ್ಧ ಕ್ರಮ ಜರುಗಿಸಲು ಆಗ್ರಹಿಸಿದ ವಕೀಲರನ್ನು ನ್ಯಾಯಪೀಠ ಪ್ರಶ್ನಿಸಿತು.


ಕೇರಳದ ಕಟ್ಟಕ್ಕಡದಲ್ಲಿ ಅತ್ಯಾಚಾರ ಪ್ರಕರಣದ ಆರೋಪಿಗೆ ಜಾಮೀನು ಮಂಜೂರು ಮಾಡುವ ಆದೇಶವನ್ನು ಪ್ರಕಟಿಸಿದ ತೀರ್ಪಿನಲ್ಲಿ ಮ್ಯಾಜಿಸ್ಟ್ರೇಟರು ಸಂತ್ರಸ್ತೆಯ ಹೆಸರನ್ನು ಬಹಿರಂಗಪಡಿಸಿದ್ದರು.


ತಮ್ಮ ಹೆಸರನ್ನು ಬಹಿರಂಗಪಡಿಸಿದ ಮ್ಯಾಜಿಸ್ಟ್ರೇಟ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಂತ್ರಸ್ತೆ ಕೋರಿದ್ದರು. 

Ads on article

Advertise in articles 1

advertising articles 2

Advertise under the article