-->
ನಕಲಿ ಜಾತಿ ಪ್ರಮಾಣಪತ್ರ ಪ್ರಶ್ನಿಸಲು ಕಾಲಮಿತಿ ಇಲ್ಲ: ಕರ್ನಾಟಕ ಹೈಕೋರ್ಟ್ ತೀರ್ಪು

ನಕಲಿ ಜಾತಿ ಪ್ರಮಾಣಪತ್ರ ಪ್ರಶ್ನಿಸಲು ಕಾಲಮಿತಿ ಇಲ್ಲ: ಕರ್ನಾಟಕ ಹೈಕೋರ್ಟ್ ತೀರ್ಪು

ನಕಲಿ ಜಾತಿ ಪ್ರಮಾಣಪತ್ರ ಪ್ರಶ್ನಿಸಲು ಕಾಲಮಿತಿ ಇಲ್ಲ: ಕರ್ನಾಟಕ ಹೈಕೋರ್ಟ್ ತೀರ್ಪು





ನಕಲಿ ಜಾತಿ ಪ್ರಮಾಣಪತ್ರ ಪಡೆದಿರುವ ಪ್ರಯೋಜನಗಳನ್ನು ಪ್ರಶ್ನಿಸಲು ಯಾವುದೇ ಕಾಲಮಿತಿ ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.


ಕರ್ನಾಟಕ ಹೈಕೋರ್ಟ್‌ನ ನ್ಯಾ. ವಿ. ಶ್ರೀಶಾನಂದ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.


ನಕಲಿ ಜಾತಿ ಪ್ರಮಾಣಪತ್ರ ಪಡೆದು ಆಯುಷ್ ವೈದ್ಯಾಧಿಕಾರಿ ಹುದ್ದೆ ಗಿಟ್ಟಿಸಿಕೊಂಡು ಸೇವೆ ಸಲ್ಲಿಸುತ್ತಿದ್ದ ಡಾ. ಗುಡ್ಡದೇವ್ ಗೊಲ್ಲಪ್ಪ ಯಡ್ರಾಮಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ. ವಿ. ಶ್ರೀಶಾನಂದ ಈ ತೀರ್ಪು ನೀಡಿದೆ.


ತಮ್ಮ ಜಾತಿ ಪ್ರಮಾಣಪತ್ರ ರದ್ದುಗೊಳಿಸಿರುವ ಅದೇಶವನ್ನು ಅನೂರ್ಜಿತಗೊಳಿಸಬೇಕು ಮತ್ತು ತಮ್ಮನ್ನು ಮತ್ತೆ ಸೇವೆಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಕೋರಿ ಅರ್ಜಿದಾರರು ನ್ಯಾಯಾಲಯದ ಮೊರೆ ಹೋಗಿದ್ದರು.


ಅರ್ಜಿದಾರರು ವಿಜಯಪುರದಲ್ಲಿ ಕಾಲೇಜಿಗೆ ಸೇರುವಾಗ ಭರ್ತಿ ಮಾಡಿದ್ದ ನಮೂನೆಯಲ್ಲಿ ಅರ್ಜಿದಾರರು ತಾನು ಹಿಂದೂ(ಕುರುಬ), ಹಿಂದುಳಿದ ವರ್ಗಕ್ಕೆ ಸೇರಿದವನು ಎಂದು ಉಲ್ಲೇಖಿಸಿದ್ದಾರೆ. ಆದರೆ, ಉದ್ಯೋಗಕ್ಕೆ ಸೇರುವ ವೇಳೆ ಪರಿಶಿಷ್ಟ ಪಂಗಡದ ಗೊಂಡಾ ಜಾತಿಗೆ ಸೇರಿದವರು ಎಂದು ಘೋಷಿಸಿಕೊಂಡರು. ಜಾತಿ ಹೇಗೆ ಬದಲಾಗಲು ಸಾಧ್ಯ ಎಂದು ಅರ್ಜಿದಾರರ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಲಯ ಪ್ರಶ್ನಿಸಿದೆ.


ಅರ್ಜಿದಾರರು ನಿಜವಾಗಿಯೂ ಎಸ್‌ಟಿ ವರ್ಗಕ್ಕೆ ಸೇರಿದ್ದರೆ ಅವರು 1975ರಲ್ಲಿ ಕಾಲೇಜಿಗೆ ಸೇರುವಾಗ ಕುರುಬ ಜಾತಿ ಉಲ್ಲೇಖಿಸುತ್ತಿರಲಿಲ್ಲ. ಹಾಗಾಗಿ, ಅರ್ಜಿದಾರರು ಶುದ್ಧಹಸ್ತದಿಂದ ನ್ಯಾಯಾಲಯದ ಮೊರೆ ಹೋಗಿಲ್ಲ. ತಮ್ಮ ಪರವಾಗಿ ಆದೇಶ ಪಡೆಯಲು ಅವರು ಹಲವು ಸಂಗತಿಗಳನ್ನು ಮುಚ್ಚಿಟ್ಟಿದ್ದಾರೆ ಎಂದು ನ್ಯಾಯಾಲಯ ಗಮನಿಸಿದೆ.



ಜೊತೆಗೆ ಅವರು ನೇಮಕಾತಿ ಪ್ರಾಧಿಕಾರದ ಮುಂದೆ ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿ, ಉದ್ಯೋಗ ಪಡೆದು ಸಾಕಷ್ಟು ಪ್ರಯೋಜನ ಪಡೆದಿದ್ದಾರೆ. ಹಾಗಾಗಿ, ಅವರ ಅರ್ಜಿಯನ್ನು ವಜಾಗೊಳಿಸುತ್ತಿರುವುದಾಗಿ ನ್ಯಾಯಪೀಠ ಹೇಳಿದೆ.



ಹೈಲೈಟ್ಸ್‌

  • ನಕಲಿ ಜಾತಿ ಪ್ರಮಾಣಪತ್ರ ಪಡೆದು ಆಯುಷ್ ವೈದ್ಯಾಧಿಕಾರಿ ಹುದ್ದೆ ಪಡೆದುಕೊಂಡಿದ್ದ ಅರ್ಜಿದಾರ
  • ಜಾತಿ ಪ್ರಮಾಣ ಪತ್ರ ರದ್ದುಗೊಳಿಸಿರುವ ಆದೇಶ ಅನೂರ್ಜಿತಗೊಳಿಸಲು ಮೇಲ್ಮನವಿ
  • ಸೇವೆಗೆ ಮರು ಸೇರ್ಪಡೆ ಮಾಡಲು ಹೈಕೋರ್ಟ್ ಮೆಟ್ಟಿಲೇರಿದ್ದ ಅರ್ಜಿದಾರ
  • ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿ, ಉದ್ಯೋಗ ಪಡೆದು ಸಾಕಷ್ಟು ಪ್ರಯೋಜನ ಪಡೆದಿದ್ದರು.

No limitation to question fraudulent act of obtaining benifit from fake caste certificate: Karnataka High Court 

Ads on article

Advertise in articles 1

advertising articles 2

Advertise under the article