-->
ಪ್ರವಾಹ ಪರಿಹಾರಕ್ಕಾಗಿ ಕೇಂದ್ರ 37 ಸಾವಿರ ಕೋಟಿ ಬಿಡುಗಡೆ ಮಾಡಿಲ್ಲ: ಸುಪ್ರೀಂ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ಪ್ರವಾಹ ಪರಿಹಾರಕ್ಕಾಗಿ ಕೇಂದ್ರ 37 ಸಾವಿರ ಕೋಟಿ ಬಿಡುಗಡೆ ಮಾಡಿಲ್ಲ: ಸುಪ್ರೀಂ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ಪ್ರವಾಹ ಪರಿಹಾರಕ್ಕಾಗಿ ಕೇಂದ್ರ 37 ಸಾವಿರ ಕೋಟಿ ಬಿಡುಗಡೆ ಮಾಡಿಲ್ಲ: ಸುಪ್ರೀಂ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ಬರ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡುತ್ತಿಲ್ಲ ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.


ಪ್ರಕೃತಿ ವಿಕೋಪದಿಂದ ಆಗಿರುವ ಹಾನಿಗೆ ಕೇಂದ್ರ ಸರ್ಕಾರ ಪರಿಹಾರ ಧನ ಬಿಡುಗಡೆ ಮಾಡಿಲ್ಲ ಎಂದು ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿ ಸುಪ್ರೀಂ ಕೋರ್ಟ್ ಮುಂದೆ ಅರ್ಜಿ ಸಲ್ಲಿಸಿದೆ.


ನೈಸರ್ಗಿಕ ವಿಕೋಪಕ್ಕೆ ಸಂಬಂಧಿಸಿದಂತೆ ಪರಿಹಾರ ನೀಡಲು ಕೇಂದ್ರ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಸರ್ಕಾರವೂ ಸುಪ್ರೀಂ ಕೋರ್ಟ್ ಕೂಡ ಕದ ತಟ್ಟಿತ್ತು. ಇದೀಗ ಇನ್ನೊಂದು ರಾಜ್ಯ ತಮಿಳುನಾಡು ಆಗಿದೆ.


ಪ್ರವಾಹ ಮತ್ತು ಮೈಚೂಂಗ್ ಚಂಡಮಾರುತದಿಂದ ಉಂಟಾದ ಹಾನಿಗೆ ಸಂಬಂಧಿಸಿದಂತೆ ಪರಿಹಾರ ನೀಡುವುದಕ್ಕಾಗಿ ರೂ. 37,000 ಕೋಟಿಗೂ ಹೆಚ್ಚು ಹಣ ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ತಮಿಳುನಾಡು ಸರ್ಕಾರ ತನ್ನ ದಾವೆಯಲ್ಲಿ ಕೋರಿಕೊಂಡಿದೆ.


ಹಣ ಬಿಡುಗಡೆಯನ್ನು ಯಾವುದೇ ಕಾರಣ ಇಲ್ಲದೆ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ತಮಿಳುನಾಡು ಸರ್ಕಾರ ವಾದ ಮಂಡಿಸಿದೆ.


ಪರಿಹಾರ ಬಿಡುಗಡೆ ಅಗದಿದ್ದರೆ ಒಂದು ಸಮಸ್ಯೆಯಿಂದ ಮತ್ತಷ್ಟು ಬಿಗಡಾಯಿಸಿದ ಇನ್ನೊಂದು ಸಮಸ್ಯೆ ಉದ್ಭವವಾಗಲಿದೆ. ಕೇಂದ್ರ ಸರಕಾರವನ್ನು ಹಲವು ಬಾರಿ ಮನವಿ ಮಾಡಿದರೂ ತಮಿಳುನಾಡು ಸರ್ಕಾರದ ಯಾವುದೇ ಮನವಿಗೆ ಸ್ಪಂದನೆ ದೊರೆತಿಲ್ಲ ಎಂದು ದಾವೆಯಲ್ಲಿ ಹೇಳಿದೆ.
Ads on article

Advertise in articles 1

advertising articles 2

Advertise under the article