-->
ಕೆಪಿಟಿಸಿಎಲ್: 902 ಹುದ್ದೆಗಳ ನೇಮಕಾತಿಗೆ ಸರ್ಕಾರ ಆದೇಶ

ಕೆಪಿಟಿಸಿಎಲ್: 902 ಹುದ್ದೆಗಳ ನೇಮಕಾತಿಗೆ ಸರ್ಕಾರ ಆದೇಶ

ಕೆಪಿಟಿಸಿಎಲ್: 902 ಹುದ್ದೆಗಳ ನೇಮಕಾತಿಗೆ ಸರ್ಕಾರ ಆದೇಶ





ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (KPTCL)ನಲ್ಲಿ ಖಾಲಿ ಇರುವ 902 ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ನೇಮಕಾತಿ ಬಯಸಿ ಅಧಿಸೂಚನೆ ಹೊರಡಿಸಲಾಗಿದೆ.


ಮಾರ್ಚ್‌ ತಿಂಗಳಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಎಂಜಿನಿಯರ್ (ವಿದ್ಯುತ್), 17 ಸಹಾಯಕ ಎಂಜಿನಿಯರ್ (ಸಿವಿಲ್), 15 ಕಿರಿಯ ಎಂಜಿನಿಯರ್ (ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ನಡೆಸಿ ನೇಮಕಾತಿ ಆದೇಶ ನೀಡಲಾಗಿದೆ.


535 ಅಭ್ಯರ್ಥಿಗಳ ಪೈಕಿ 502 ಕಿರಿಯ ಎಂಜಿನಿಯರಿಂಗ್ ಅಭ್ಯರ್ಥಿಗಳಿಗೆ ಕಳೆದ ಎರಡು ದಿನಗಳಲ್ಲಿ ಕೌನ್ಸೆಲಿಂಗ್ ನಡೆಸಿ ನೇಮಕ ಆದೇಶ ನೀಡಲಾಗಿದೆ. ಈ ಪೈಕಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದವರಾಗಿದ್ದಾರೆ. ಉಳಿದ 429 ಅಭ್ಯರ್ಥಿಗಳು ಇತರೆ ವೃಂದದವರು.


ಇನ್ನುಳಿದಂತೆ 360 ಕಿರಿಯ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಮೇ 24 ರಂದು ಕಡೇ ದಿನವಾಗಿರುತ್ತದೆ.


ಸ್ವೀಕರಿಸಿದ ಆಕ್ಷೇಪಣೆ ಅರ್ಜಿಗಳನ್ನು ಪರಿಶೀಲನೆ ನಡೆಸಿದ ಬಳಿಕ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಕೆಪಿಟಿಸಿಎಲ್ ಮುಂದಾಗಿದೆ.


ಎಲ್ಲ ಅಭ್ಯರ್ಥಿಗಳ ವಿದ್ಯಾರ್ಹತೆ ಹಾಗೂ ಮೀಸಲು ಕೋರಿರುವ ದಾಖಲೆಗಳ ಬಗ್ಗೆ ಸಂಬಂಧಪಟ್ಟ ಪ್ರಾಧಿಕಾದಿಂದ ದೃಢೀಕರಣ ಪಡೆದು ತ್ವರಿತವಾಗಿ ಸ್ಥಳ ನಿಯುಕ್ತಿ ಹಾಗೂ ನೇಮಕಾತಿ ಆದೇಶ ನೀಡಲು ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಕೆಪಿಟಿಸಿಎಲ್ ತಿಳಿಸಿದೆ.



Ads on article

Advertise in articles 1

advertising articles 2

Advertise under the article