-->
ವಕೀಲರ ವಿರುದ್ಧವೇ ಕಾನೂನು ಕ್ರಮ: ಮಕ್ಕಳ ಹಕ್ಕುಗಳ ರಕ್ಷಣ ಆಯೋಗ ಸೂಚನೆ

ವಕೀಲರ ವಿರುದ್ಧವೇ ಕಾನೂನು ಕ್ರಮ: ಮಕ್ಕಳ ಹಕ್ಕುಗಳ ರಕ್ಷಣ ಆಯೋಗ ಸೂಚನೆ

ವಕೀಲರ ವಿರುದ್ಧವೇ ಕಾನೂನು ಕ್ರಮ: ಮಕ್ಕಳ ಹಕ್ಕುಗಳ ರಕ್ಷಣ ಆಯೋಗ ಸೂಚನೆ





ಉಡುಪಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾಗಿರುವ ನ್ಯಾಯವಾದಿಗಳು ಮಕ್ಕಳ ವಿರುದ್ಧದ ಪ್ರಕರಣಗಳನ್ನು ತೆಗೆದುಕೊಳ್ಳುತ್ತಿರುವ ಕುರಿತು ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಬೆಂಗಳೂರು ಮಕ್ಕಳ ರಕ್ಷಣಾ ನಿರ್ದೇಶನಾಲಯಕ್ಕೆ ಸೂಚನೆ ನೀಡಿದೆ.


ಉಡುಪಿ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರೊಬ್ಬರು ಲೈಂಗಿಕ ದೌರ್ಜನ್ಯಕ್ಕೆ ಒಳಪಟ್ಟ ಬಾಲಕಿಯ ಪ್ರಕರಣದಲ್ಲಿ ಆರೋಪಿ ಪರವಾಗಿ ವಕಾಲತ್ತು ಸಲ್ಲಿಸಿ ನ್ಯಾಯಾಲಯದಲ್ಲಿ ಜಾಮೀನು ಕೊಡಿಸಲು ಪ್ರಯತ್ನ ನಡೆಸುತ್ತಿದ್ದಾರೆ. ಅವರ ಮೇಲೆ ಅಗತ್ಯ ಕ್ರಮ ಕೈಗೊಳ್ಳುವಂತೆ ಬಾಲಕಿ ತಂದೆ ಆಯೋಗಕ್ಕೆ ಮನವಿ ಸಲ್ಲಿಸಿದ್ದರು.


ಮನವಿಯನ್ನು ಸ್ವೀಕರಿಸಿದ ಆಯೋಗ ಪ್ರಕರಣವನ್ನು ಪರಿಗಣಿಸಿದ್ದು, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರೊಬ್ಬರ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ. ಈ ಬಗ್ಗೆ ಮೂರು ದಿನಗೊಳಗೆ ವರದಿ ನೀಡುವಂತೆ ಸೂಚನೆಯಲ್ಲಿ ತಿಳಿಸಲಾಗಿದೆ.


ಮಕ್ಕಳ ಕಲ್ಯಾಣ ಸಮಿತಿಯು ಸಂತ್ರಸ್ತ ಮಕ್ಕಳಿಗೆ ನ್ಯಾಯ ಒದಗಿಸುವ ಪ್ರಮುಖ ಸಂಸ್ಥೆಯಾಗಿದೆ. ಇಂತಹ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದುಕೊಂಡು ಆರೋಪಿ ಪರವಾಗಿ ವಕಾಲತ್ತು ಸಲ್ಲಿಸಿರುವುದು ಸರಿಯಲ್ಲ. ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡು ಸದಸ್ಯರು ಉದ್ದೇಶಪೂರ್ವಕವಾಗಿ ಪ್ರಕರಣದ ಹಿನ್ನಡೆಗೆ ಕಾರಣರಾಗಿದ್ಧಾರೆ ಎಂದು ಆಯೋಗ ಆತಂಕ ವ್ಯಕ್ತಪಡಿಸಿದೆ.


Ads on article

Advertise in articles 1

advertising articles 2

Advertise under the article