ಕಾನ್ಸ್‌ಟೆಬಲ್‌ಗಳ ಅಂತರ್ ಜಿಲ್ಲಾ ವರ್ಗಾವಣೆ ಶೀಘ್ರ: ಗೃಹ ಸಚಿವಾಲಯ
Sunday, June 9, 2024
ಕಾನ್ಸ್‌ಟೆಬಲ್‌ಗಳ ಅಂತರ್ ಜಿಲ್ಲಾ ವರ್ಗಾವಣೆ ಶೀಘ್ರ: ಗೃಹ ಸಚಿವಾಲಯ
ಪೊಲೀಸ್ ಸಿಬ್ಬಂದಿಯ ಅಂತರ್ ಜಿಲ್ಲಾ ವರ್ಗಾವಣೆಗೆ ಶೀಘ್ರ ಚಾಲನೆ ನೀಡಲಾಗುವುದು ಎಂದು ಗೃಹ ಸಚಿವಾಲಯ ಪ್ರಕಟಿಸಿದೆ.
ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿ ಇದ್ದ ಕಾರಣ ಎರಡು ತಿಂಗಳಿನಿಂದ ಅಂತರ್ ಜಿಲ್ಲಾ ವರ್ಗಾವಣೆ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಈಗಾಗಲೇ ಒಂದೂವರೆ ವರ್ಷದಿಂದ ಅಂತರ್ ಜಿಲ್ಲಾ ವರ್ಗಾವಣೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಪರಿಶೀಲಿಸಲಾಗಿಲ್ಲ.
ಈ ಪ್ರಕ್ರಿಯೆಯನ್ನು ತಕ್ಷಣ ಆದ್ಯತೆಯ ಮೇರೆಗೆ ಕೈಗೆತ್ತಿಕೊಂಡು ಅರ್ಹ ವರ್ಗಾವಣೆ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು. ಇದರಿಂದ ಪೊಲೀಸ್ ಇಲಾಖೆಯೂ ಸಮರ್ಪಕವಾಗಿ ಮತ್ತು ಸದೃಢವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.