ಅಪ್ರಾಪ್ತ ಬಾಲಕಿಯ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗಳನ್ನು ಖುಲಾಸೆಗೊಳಿಸಿದ ಮಂಗಳೂರು ಪೋಕ್ಸೊ ಕೋರ್ಟ್
ಅಪ್ರಾಪ್ತ ಬಾಲಕಿಯ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗಳನ್ನು ಖುಲಾಸೆಗೊಳಿಸಿದ ಮಂಗಳೂರು ಪೋಕ್ಸೊ ಕೋರ್ಟ್
ದಕ್ಷಿಣ ಕನ್ನಡದಲ್ಲಿ ದಾಖಲಾದ ಅಪ್ರಾಪ್ತ ಬಾಲಕಿಯ ಲೈಂಗಿಕ ಕಿರುಕುಳ ಪ್ರಕರಣವೊಂದರಲ್ಲಿ ಆರೋಪಿಗಳನ್ನು ಖುಲಾಸೆಗೊಳಿಸಿ ಮಂಗಳೂರು ಪೋಕ್ಸೊ ಕೋರ್ಟ್ ತೀರ್ಪು ನೀಡಿದೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಶೇಷಚೈತನ್ಯ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಲು ಯತ್ನಿಸುತ್ತಿದ್ದ ವ್ಯಕ್ತಿ ಹಾಗೂ ಸಂತ್ರಸ್ತ ಬಾಲಕಿಯ ಮೇಲೆ ಹಲ್ಲೆಗೆ ಸಹಕರಿಸಿದ ಮಹಿಳೆಯ ವಿರುದ್ಧ ದೂರು ದಾಖಲಾಗಿತ್ತು.
ಮುಂಬೈನಲ್ಲಿ ವಾಸವಾಗಿದ್ದ ಬಿಹಾರ ಮೂಲದ ಅಬ್ದುಲ್ ಹಲೀಂ (37) ಮತ್ತು ಕುಲಶೇಖರ ನಿವಾಸಿ ಶಮೀನಾ ಬಾನು (22) ಈ ಪ್ರಕರಣದಲ್ಲಿ ಆರೋಪಿಗಳಾದಗಿದ್ದರು.
ದೂರುದಾರ ಮಹಿಳೆಯ ಕಿರಿಯ ಸಹೋದರ ಮನ್ಸೂರ್ ಅಹಮದ್ ಬಾಬಾ ಶೇಖಾ ಮತ್ತು ಆರೋಪಿ ಅಬ್ದುಲ್ ಹಲೀಂ ಅತ್ಮೀಯ ಸ್ನೇಹಿತರಾಗಿದ್ದು, ಆಗಸ್ಟ್ 10 ರಂದು ಕಾಸರಗೋಡಿನಿಂದ ಬೈಕ್‌ನಲ್ಲಿ ಹಿಂತಿರುಗುತ್ತಿದ್ದರು. ಆಗ ಅವರ ಬೈಕ್ ಹೊಸಂಗಡಿಯಲ್ಲಿ ಅಪಘಾತಕ್ಕೀಡಾಗಿದ್ದು, ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖ ಲಾಗಿದ್ದರು. ಇಬ್ಬರೂ ಆಸ್ಪತ್ರೆಯ ಒಂದೇ ಕೋಣೆಯಲ್ಲಿದ್ದರು, ಅವರ ನಡುವೆ ಒಂದು ಪರದೆ ಇತ್ತು.
ಅಪಘಾತದ ಬಗ್ಗೆ ವಿಚಾರಿಸಲು ದೂರುದಾರ ಮಹಿಳೆ ಮತ್ತು ಅವರ ಹಿರಿಯ ಮಗಳು ಮಂಜೇಶ್ವರ ಠಾಣೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ತನ್ನ ಕಿರಿಯ ಸಹೋದರನ ಪತ್ನಿ ಶಮೀನಾ ಬಾನು ಎಂಬಾಕೆಯೊಂದಿಗೆ ವಿಶೇಷ ಚೈತನ್ಯ ಕಿರಿಯ ಮಗಳನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗಿದ್ದರು.
ಆರೋಪಿಗಳಾದ ಶಮೀನಾ ಬಾನು ಆಸ್ಪತ್ರೆಯಲ್ಲಿ ಮತ್ತು ಅಬ್ದುಲ್ ಹಲೀಂ ಜೊತೆ ಅನೈತಿಕವಾಗಿ ವರ್ತಿಸುತ್ತಿರುವುದನ್ನು ಅಪ್ರಾಪ್ತ ದಿವ್ಯಾಂಗ ಬಾಲಕಿ ನೋಡಿದ್ದಾಳೆ. ನಂತರ ಶಮೀನಾ ವಿಕಲಚೇತನ ಬಾಲಕಿಯನ್ನು ಆರೋಪಿ ಅಬ್ದುಲ್ ಹಲೀಂನ ಹಾಸಿಗೆಯ ಮೇಲೆ ಕೂರಿಸಿದ್ದಳು.
ಸಂತ್ರಸ್ತ ಬಾಲಕಿಯನ್ನು ಹಾಸಿಗೆಯ ಮೇಲೆ ಕೂರಿಸಿದ ಹುಡುಗಿಗೆ ಆರೋಪಿ ಶಮೀನಾ ಸಹಾಯದಿಂದ ಅಬ್ದುಲ್ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿತ್ತು.
ಈ ಸಂಬಂಧ ಸಂತ್ರಸ್ತ ಬಾಲಕಿಯ ತಾಯಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಾ. 16-08-2023 ರಂದು ಮಂಗಳೂರಿನ ಮಹಿಳಾ ರಾಣೆ ಯಲ್ಲಿ ದಾಖಲಾದ ಅಪರಾಧ ಸಂಖ್ಯೆ 71/2023 ಪ್ರಕರಣವನ್ನು ಸ್ಪೆಷಲ್ ಕೇಸ್ ನಂ 183/2023ರಂತೆ ವಿಚಾರಣೆ ನಡೆಸಿದ ಮಾನ್ಯ ಎರಡನೇ ಹೆಚ್ಚುವರಿ ಜಿಲ್ಲಾ ವಿಶೇಷ ಸತ್ರ ನ್ಯಾಯಾಲಯ (FTSC2) ದ ನ್ಯಾಯಾಧೀಶರಾದ ಶ್ರೀ ಮಾನು ಕೆ. ಎಸ್.ರವರು ತಾ. 26.07.2024ರಂದು ಆರೋಪಿಗಳನ್ನು ನಿರಪರಾಧಿ ಗಳೆಂದು ಖುಲಾಸೆ ಗೊಳಿಸಿ ಆದೇಶ ನೀಡಿರುತ್ತಾರೆ.
ಒಂದನೇ ಆರೋಪಿತರ ಪರವಾಗಿ ಮಂಗಳೂರಿನ ಯುವ ವಕೀಲರಾದ ಶ್ರೀ ಜಗದೀಶ್ ಕೆ. ಆರ್., ಪ್ರಸಾದ, ಹೇಮಂತ್, ಪ್ರಜ್ಞಾ ಹಾಗೂ 2ನೇ ಆರೋಪಿ ರ ಪರವಾಗಿ ಶ್ರೀ ಬಿ ವಿವೇಕ್ ಮುಲ್ಕಿ, ಕೃಷ್ಣ ಕಾರಾಂತ್, ಚೇತನಾ ಕೆ, ಮತ್ತು ಅಲೇಕ್ಯ ಕೆ ವಾದಿಸಿದ್ದರು.