-->
ಆಕ್ಷೇಪಾರ್ಹ ಹೇಳಿಕೆ, ಸುದ್ದಿ ಪ್ರಕಟಿಸದಂತೆ ಪ್ರತಿಬಂಧಕಾಜ್ಞೆ ಕೋರಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಆಕ್ಷೇಪಾರ್ಹ ಹೇಳಿಕೆ, ಸುದ್ದಿ ಪ್ರಕಟಿಸದಂತೆ ಪ್ರತಿಬಂಧಕಾಜ್ಞೆ ಕೋರಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಆಕ್ಷೇಪಾರ್ಹ ಹೇಳಿಕೆ, ಸುದ್ದಿ ಪ್ರಕಟಿಸದಂತೆ ಪ್ರತಿಬಂಧಕಾಜ್ಞೆ ಕೋರಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ





ತಮ್ಮ ವಿರುದ್ಧ ಯಾವುದೇ ರೀತಿಯ ಆಕ್ಷೇಪಾರ್ಹ ಹೇಳಿಕೆ ಮತ್ತು ಸುದ್ದಿ ಪ್ರಕಟಿಸದಂತೆ ವಕೀಲರಾದ ಕೆ.ಎನ್. ಜಗದೀಶ್ ಮತ್ತು ಮಾಧ್ಯಮ ಸಂಸ್ಥೆಗಳ ವಿರುದ್ಧ

ಪ್ರತಿಬಂಧಕಾಜ್ಞೆ ಹೊರಡಿಸುವಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರಿನ ಸತ್ರ ನ್ಯಾಯಾಲಯಕ್ಕೆ ಕೋರಿಕೆ ಅರ್ಜಿ ಸಲ್ಲಿಸಿದ್ದಾರೆ.



ಹಾವೇರಿ ಲೋಕಸಭಾ ಕ್ಷೇತ್ರದ ಸದಸ್ಯರೂ ಆಗಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ 8ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ವಾಣಿ ಎ. ಶೆಟ್ಟಿ ಅವರ ನ್ಯಾಯಾಲಯದಲ್ಲಿ ಈ ಅರ್ಜಿ ಸಲ್ಲಿಸಿದ್ದಾರೆ.


ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಪಭುಲಿಂಗ ನಾವದಗಿ ವಾದಿಸಿದರು. ವಕೀಲರಾದ ಜಗದೀಶ್ ಅವರು ವೀಡಿಯೋ ಬಿಡುಗಡೆ ಮಾಡಿದ್ದು, ಇದರಲ್ಲಿ ತಮ್ಮ ವಿರುದ್ಧ ಬಸವರಾಜ ಬೊಮ್ಮಾಯಿ ಅವರ ಆಪ್ತ ಸಹಾಯಕರು ಪೊಲೀಸರಿಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ತಮ್ಮನ್ನು ಪೊಲೀಸ್ ವಿಚಾರಣೆಗೆ ಕರೆದಿದ್ದಾರೆ ಎಂದು ಹೇಳಿಕೊಂಡಿದ್ದರು. ಈ ವಿಡಿಯೋದಲ್ಲಿ ಬೊಮ್ಮಾಯಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು.




Ads on article

Advertise in articles 1

advertising articles 2

Advertise under the article

  

  

  

Join our WhatsApp Channel Powered By : Online Pudu