ಕಾನೂನು ಪದವೀಧರ ವಕೀಲರಿಗೆ ಶಿಷ್ಯವೇತನ: ಅರ್ಜಿ ಆಹ್ವಾನ
Monday, August 5, 2024
ಕಾನೂನು ಪದವೀಧರ ವಕೀಲರಿಗೆ ಶಿಷ್ಯವೇತನ: ಅರ್ಜಿ ಆಹ್ವಾನ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ, ಶಿಷ್ಯವೇತನ ಮಂಜೂರು ಮಾಡಲು ಅರ್ಹ ಮತ್ತು ಆಸಕ್ತ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 22, 2024ರಂದು ಕೊನೆಯ ದಿನವಾಗಿರುತ್ತದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಲು ಕೋರಲಾಗಿದೆ.