ನಿವೃತ್ತ ಸಿಜೆಐ ಪ್ರತಿವಾದಿ ಮಾಡಿ ಪಿಐಎಲ್: ಅರ್ಜಿದಾರರಿಗೆ ಕ್ಲಾಸ್ ತೆಗೆದುಕೊಂಡ ಸುಪ್ರೀಂ ಕೋರ್ಟ್
ನಿವೃತ್ತ ಸಿಜೆಐ ಪ್ರತಿವಾದಿ ಮಾಡಿ ಪಿಐಎಲ್: ಅರ್ಜಿದಾರರಿಗೆ ಕ್ಲಾಸ್ ತೆಗೆದುಕೊಂಡ ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರನ್ನು ಪ್ರತಿವಾದಿ ಮಾಡಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದ ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಕ್ಲಾಸ್ ತೆಗೆದುಕೊಂಡಿದೆ.
ಪುಣೆ ಮೂಲದ ಅರ್ಜಿದಾರರು ಸಲ್ಲಿಸಿದ ಪಿಐಎಲ್‌ನ್ನು ವಿಚಾರಣೆಗೆ ತೆಗೆದುಕೊಂಡ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರಿದ್ದ ನ್ಯಾಯಪೀಠವು ನ್ಯಾಯಮೂರ್ತಿಗಳು, ನ್ಯಾಯಾಲಯದ ಬಗ್ಗೆ ತುಸು ಗೌರವ, ಘನತೆ ತೋರಬೇಕು ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿತು.
ನ್ಯಾಯಮೂರ್ತಿಯೊಬ್ಬರನ್ನು ಪ್ರತಿವಾದಿ ಮಾಡಿ ನೀವು ಪಿಐಎಲ್ ಸಲ್ಲಿಸಿದ್ದು ಹೇಗೆ? ನಿವೃತ್ತ ನ್ಯಾಯಮೂರ್ತಿಗಳ ವಿರುದ್ಧ ಆಂತರಿಕ ವಿಚಾರಣೆ ಆಗಬೇಕು ಎಂದು ಹೀಗೆ ಸುಮ್ಮನೆ ಹೇಳಲು ಅವಕಾಶವಿಲ್ಲ. ಅವರು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಗಿದ್ದವರು ಎಂದು ಅಸಮಾಧಾನ ವ್ಯಕ್ತಪಡಿಸಿ ಅರ್ಜಿಯನ್ನು ವಜಾಗೊಳಿಸಿತು.
ಸೇವಾ ತಕರಾರಿಗೆ ಸಂಬಂಧಿಸಿದ ಅರ್ಜಿಯೊಂದನ್ನು ವಜಾಗೊಳಿಸಿದ ಹಿನ್ನೆಲೆಯಲ್ಲಿ ನಿವೃತ್ತ ಸಿಜೆಐ ವಿರುದ್ಧ ಆಂತರಿಕ ವಿಚಾರಣೆ ಕೋರಲಾಗಿತ್ತು.