ಶೇ 33ರಷ್ಟು ಮಹಿಳಾ ಮೀಸಲಾತಿ: ದೇಶದ ಎಲ್ಲ ವಕೀಲರ ಸಂಘಗಳಿಗೆ ಸುಪ್ರೀಂ ಕೋರ್ಟ್ ನೋಟೀಸ್ ಜಾರಿ
ಶೇ 33ರಷ್ಟು ಮಹಿಳಾ ಮೀಸಲಾತಿ: ದೇಶದ ಎಲ್ಲ ವಕೀಲರ ಸಂಘಗಳಿಗೆ ಸುಪ್ರೀಂ ಕೋರ್ಟ್ ನೋಟೀಸ್ ಜಾರಿ
ವಕೀಲರ ಸಂಘಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಾಗಿ ಕಲ್ಪಿಸಬೇಕು ಎಂದು ಕೋರಿ ಅರ್ಜಿಯೊಂದನ್ನು ಸಲ್ಲಿಸಲಾಗಿದ್ದು, ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಬೇಕು ಎಂದು ದೆಹಲಿ ವಕೀಲರ ಸಂಘ ಮತ್ತು ದೇಶದ ಎಲ್ಲ ವಕೀಲರ ಸಂಘಗಳಿಗೆ ಸುಪ್ರೀಂ ಕೋರ್ಟ್ ನೋಟೀಸ್ ಜಾರಿಗೊಳಿಸಿದೆ.
ಸುಪ್ರೀಂ ಕೋರ್ಟ್‌ನ ನ್ಯಾ. ಸೂರ್ಯಕಾಂತ್ ಮತ್ತು ನ್ಯಾ. ಉಜ್ಜಲ್ ಭುಯಾನ್ ಅವರಿದ್ದ ನ್ಯಾಯಪೀಠ ಈ ನೋಟೀಸ್ ಜಾರಿಗೊಳಿಸಿದೆ.
ದೆಹಲಿಯ ಎಲ್ಲ ಜಿಲ್ಲಾ ವಕೀಲರ ಸಂಘಗಳು ಮತ್ತು ದೆಹಲಿ ಹೈಕೋರ್ಟ್ ವಕೀಲರ ಸಂಘಕ್ಕೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಲ್ಪಿಸಬೇಕು ಎಂದು ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಈ ನೋಟೀಸ್ ಜಾರಿಗೊಳಿಸಿದೆ.
ವಕೀಲರ ಸಂಘಗಳ ಚುನಾವಣಾ ಪ್ರಚಾರ ಈಗಾಗಲೇ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಶೀಘ್ರವೇ ನಡೆಸುವಂತೆ ಅರ್ಜಿದಾರರು ಪರ ವಕೀಲರು ವಿನಂತಿಸಿದರು. ಆದರೆ, ಇದಕ್ಕೆ ನ್ಯಾಯಪೀಠ ಸಮ್ಮತಿ ನೀಡಲಿಲ್ಲ. ಬದಲಿಗೆ, ಚುನಾವಣೆಗಳಿಗೆ ಹಣ ಖರ್ಚು ಮಾಡುವುದನ್ನು ನಿಲ್ಲಿಸಿ ಎಂದು ಸಂಘಗಳ ಕಿವಿ ಹಿಂಡಿತು.
ದೆಹಲಿ ವಕೀಲರ ಪರಿಷತ್ತು ಮತ್ತು ರಾಷ್ಟ್ರ ರಾಜಧಾನಿಯ ಎಲ್ಲ ವಕೀಲರ ಸಂಘಗಳಿಗೆ ಅಕ್ಟೋಬರ್ 19ರಂದು ಚುನಾವಣೆ ನಡೆಯುತ್ತಿದೆ.
ಯಾವುದೇ ಅಭ್ಯರ್ಥಿಯು ಏಕಕಾಲದಲ್ಲಿ ಎರಡು ಹುದ್ದೆಗಳಿಗೆ ಸ್ಪರ್ಧಿಸಲು ಅವಕಾಶ ಇಲ್ಲ ಎಂಬ ದೆಹಲಿ ಹೈಕೋರ್ಟ್ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಪ್ರಕರಣ: ಶೋಭಾ ಗುಪ್ತಾ ಮತ್ತಿತರರು Vs ದೆಹಲಿ ವಕೀಲರ ಸಂಘ (ಸುಪ್ರೀಂ ಕೋರ್ಟ್)