ಜನ್ಮ ದಿನಾಂಕ ನಿರ್ಧರಿಸಲು ಆಧಾರ್ ಕಾರ್ಡ್ ಅಧಿಕೃತ ಪುರಾವೆಯಲ್ಲ: ಸುಪ್ರೀಂ ಕೋರ್ಟ್
ಜನ್ಮ ದಿನಾಂಕ ನಿರ್ಧರಿಸಲು ಆಧಾರ್ ಕಾರ್ಡ್ ಅಧಿಕೃತ ಪುರಾವೆಯಲ್ಲ: ಸುಪ್ರೀಂ ಕೋರ್ಟ್
ಯಾವುದೇ ವ್ಯಕ್ತಿಯ ಜನ್ಮ ದಿನಾಂಕವನ್ನು ನಿರ್ಧರಿಸಲು ಆಧಾರ್ ಕಾರ್ಡ್ ಅಧಿಕೃತ ಪುರಾವೆಯಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಸುಪ್ರೀಂ ಕೋರ್ಟ್‌ನ ನ್ಯಾ. ಸಂಜಯ್ ಕರೋಲ್ ಮತ್ತು ಉಜ್ವಲ್ ಭುಯಾನ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ತೀರ್ಪು ನೀಡಿದೆ.
ಜನ್ಮ ದಿನಾಂಕದ ಪುರಾವೆಗೆ ಸಂಬಂಧಿಸಿದಂತೆ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಹೊರಡಿಸಿರುವ ಸುತ್ತೋಲೆ ಮತ್ತು ಸಂಬಂಧಪಟ್ಟಕಾಯ್ದೆಯಲ್ಲಿ ಇರುವ ಅಂಶಗಳನ್ನು ನ್ಯಾಯಪೀಠ ತೀರ್ಪಿನಲ್ಲಿ ಉಲ್ಲೇಖಿಸಿದೆ.
ಆಧಾರ್ ಕಾರ್ಡ್‌ನ್ನು ಗುರುತಿನ ಪುರಾವೆಯಾಗಿ ಬಳಸಬಹುದು. ಇದು ಜನ್ಮ ದಿನಾಂಕದ ಅಧಿಕೃತ ಪುರಾವೆಯಲ್ಲ ಎಂಬುದನ್ನು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ತನ್ನ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದೆ.
ರಸ್ತೆ ಅಪಘಾತದಲ್ಲಿ ಸಂಬಂಧಿಸಿದ ಸಾರಿಗೆ ಸಂಬಂಧಿಸಿ ಆಧಾರ್ ಕಾರ್ಡ್‌ನಲ್ಲಿ ನಮೂದಿಸಿದ್ದ ಜನ್ಮ ದಿನಾಂಕವನ್ನು ಆಧಾರವನ್ನಾಗಿ ಪರಿಗಣಿಸಿ ಪರಿಹಾರ ಮೊತ್ತವನ್ನು ಕಡಿತ ಮಾಡಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತೀರ್ಪು ನೀಡಿತ್ತು.
ಈ ತೀರ್ಪನ್ನು ಪ್ರಶ್ನಿಸಿ ಸರೋಜ್ ಮತ್ತು ಇತರರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಅಪಘಾತದಲ್ಲಿ ಸಂಭವಿಸಿದ ಸಾವಿನ ಕುರಿತಾಗಿ ಪರಿಹಾರ ಮೊತ್ತವನ್ನು ನಿಗದಿ ಮಾಡಲು ವರ್ಗಾವಣೆ ಪ್ರಮಾಣ ಪತ್ರವನ್ನೇ ಜನ್ಮ ದಿನಾಂಕ ದೃಢೀಕರಣಕ್ಕೆ ಆಧಾರವಾಗಿ ಪರಿಗಣಿಸಿ ಮೋಟಾರು ಅಪಘಾತ ಕ್ಲೇಮುಗಳ ನ್ಯಾಯಮಂಡಳಿ ಹೊರಡಿಸಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
ಪರಿಹಾರದ ಮೊತ್ತವನ್ನು 9.22 ಲಕ್ಷ ರೂ.ಗಳಿಗೆ 15 ಲಕ್ಷಕ್ಕೆ ಹೆಚ್ಚಿಸಿ ಬಡ್ಡಿದರ ಶೇಕಡಾ 8ರಷ್ಟು ನಿಗದಿ ಮಾಡಿ ಆದೇಶ ಹೊರಡಿಸಿದೆ.