HSRP ನಂಬರ್ ಪ್ಲೇಟ್: ಮತ್ತೊಂದು ಡೆಡ್‌ಲೈನ್ ನೀಡಿದ ಕರ್ನಾಟಕ ಹೈಕೋರ್ಟ್
HSRP ನಂಬರ್ ಪ್ಲೇಟ್: ಮತ್ತೊಂದು ಡೆಡ್‌ಲೈನ್ ನೀಡಿದ ಕರ್ನಾಟಕ ಹೈಕೋರ್ಟ್
ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸುವ ಬಗ್ಗೆ ಕರ್ನಾಟಕ ಹೈಕೋರ್ಟ್ ಮತ್ತೊಂದು ಡೆಡ್‌ಲೈನ್ ನೀಡಿದೆ.
ಕರ್ನಾಟಕ ಹೈಕೋರ್ಟ್‌ನ ನ್ಯಾ. ಕೆ. ಕಾಮೇಶ್ವರ ರಾವ್ ಮತ್ತು ಕೆ. ರಾಜೇಶ್ ರೈ ಅವರಿದ್ದ ನ್ಯಾಯಪೀಠ, HSRP ನಂಬರ್ ಪ್ಲೇಟ್ ಅಳವಡಿಕೆಗೆ ಡಿಸೆಂಬರ್ 5ರ ರಿಯಾಯಿತಿ ನೀಡಿ ಮತ್ತೊಂದು ಡೆಡ್‌ಲೈನ್ ನೀಡಿದೆ.
ನಿರ್ದಿಷ್ಟ ಉತ್ಪಾದಕರು ಮಾತ್ರ ಪೂರೈಸಬೇಕು ಮತ್ತು ನಿರ್ದಿಷ್ಟ ಡೀಲರ್‌ಗಳು ಮಾತ್ರ ಅಳವಡಿಸಬೇಕು ಎಂಬ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಲ್ಲಿಸಿದ್ದ ಮೇಲ್ಮನವಿಗಳ ವಿಚಾರಣೆಯನ್ನು ಇದೇ ವೇಳೆ ಮುಂದೂಡಲಾಗಿದೆ.
ವಾಹನ ತಯಾರಿಸುವ ಮೂಲ ಸಾಧನಗಳ ಉತ್ಪಾದಕರು ಅನುಮತಿಸಿರುವ ಲೈಸನ್ಸ್ ಹೊಂದಿರುವ ಅತಿ ಸುರಕ್ಷಿತ ನಂಬರ್ ಪ್ಲೇಟ್‌ಗಳನ್ನು ಉತ್ಪಾದಕರು ಮಾತ್ರ ಎಚ್‌ಎಸ್‌ಆರ್ ಪ್ಲೇಟ್‌ಗಳನ್ನು ಹಳೆಯ ವಾಹನಗಳಿಗೆ ಪೂರೈಸಬೇಕು. ಈ ಫಲಕಗಳನ್ನು ವಾಹನ ಉತ್ಪಾದಕರು ಅನುಮತಿ ನೀಡುವ ಡೀಲರ್‌ಗಳು ಮಾತ್ರ ಅಳವಡಿಸಬೇಕು ಎಂಬ ನಿಯಮ ರೂಪಿಸಲಾಗಿತ್ತು.
ಹಳೆಯ ವಾಹನಗಳಿಗೆ ಆಗಸ್ಟ್, 2024ರ ಒಳಗೆ ನೂತನ ನಂಬರ್ ಪ್ಲೇಟ್ ಅಳವಡಿಸಬೇಕು ಎಂಬ ಸಾರಿಗೆ ಇಲಾಖೆ ಹೊರಡಿಸಿರುವ ಸುತ್ತೋಲೆ ಮತ್ತು ಈ ಸುತ್ತೋಲೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿರುವ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿಗಳನ್ನು ಸಲ್ಲಿಸಲಾಗಿತ್ತು.
ಈ ಮೇಲ್ಮನವಿಗಳ ವಿಚಾರಣೆ ಹೈಕೋರ್ಟ್ ವಿಭಾಗೀಯ ಪೀಠದ ಮುಂದಿದೆ.