
ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ: 3600 ಹುದ್ದೆಗಳಿಗೆ ಪದವೀಧರರಿಂದ ಅರ್ಜಿ ಆಹ್ವಾನ
Monday, May 12, 2025
ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ: 3600 ಹುದ್ದೆಗಳಿಗೆ ಪದವೀಧರರಿಂದ ಅರ್ಜಿ ಆಹ್ವಾನ
ದೇಶದ ಮುಂಚೂಣಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆದ ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ ಇದ್ದು, ವಿವಿಧ ರಾಜ್ಯಗಳಲ್ಲಿ ಒಟ್ಟು 3600 ಖಾಲಿ ಇರುವ ಹುದ್ದೆಗಳಿಗೆ ಪದವೀಧರರಿಂದ ಅರ್ಜಿ ಆಹ್ವಾನ ಮಾಡಲಾಗಿದೆ.
ಕರ್ನಾಟಕದಲ್ಲಿ 250 ಹುದ್ದೆಗಳಿದ್ದು, ನೇಮಕಾತಿಗೆ ಜುಲೈ 2025ರಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ. ಸ್ಥಳೀಯ ಭಾಷೆಗೆ ಆದ್ಯತೆ ನೀಡಿ ಪರೀಕ್ಷೆ ನಡೆಸಲಾಗುವುದು.
ಅರ್ಜಿ ಸಲ್ಲಿಸಲು ಮೇ 9, 2025ರಂದು ಆರಂಭದ ದಿನವಾಗಿದ್ದು, ಮೇ 29ರಂದು ಕೊನೇ ದಿನವಾಗಿರುತ್ತದೆ.
ವಯೋಮಿತಿ: ಕನಿಷ್ಟ 21 ಮತ್ತು ಗರಿಷ್ಟ 30 ವರ್ಷ ವಯೋಮಿತಿ. ನಿಯಮಾನುಸಾರ ಮಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಲಾದ ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ನ್ನು ಸಂಪರ್ಕಿಸಲು ಕೋರಲಾಗಿದೆ.
https://sbi.co.in/web/careers/Current-openings