-->
ಕಾನೂನು ಶಿಕ್ಷಣದಲ್ಲಿ ಕನ್ನಡ ಭಾಷೆ ಬಳಸಿ: ಯುಜಿಸಿಗೆ ಪತ್ರ ಬರೆದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ

ಕಾನೂನು ಶಿಕ್ಷಣದಲ್ಲಿ ಕನ್ನಡ ಭಾಷೆ ಬಳಸಿ: ಯುಜಿಸಿಗೆ ಪತ್ರ ಬರೆದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ

ಕಾನೂನು ಶಿಕ್ಷಣದಲ್ಲಿ ಕನ್ನಡ ಭಾಷೆ ಬಳಸಿ: ಯುಜಿಸಿಗೆ ಪತ್ರ ಬರೆದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ





ಕಾನೂನು ಸೇವೆ ಸಲ್ಲಿಸಲು, ನ್ಯಾಯವಾದಿಯಾಗಿ ವೃತ್ತಿ ಆರಂಭಿಸಲು ರಾಜ್ಯದ ಅಸಂಖ್ಯಾತ ಗ್ರಾಮೀಣ ಪ್ರತಿಭೆಗಳಿಗೆ ಆಕಾಂಕ್ಷೆ ಇದ್ದು, ಅವರಿಗೆ ಕನ್ನಡದಲ್ಲೇ ಕಾನೂನು ಶಿಕ್ಷಣ ಸಿಗುವಂತಾಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟಿದ್ಧಾರೆ.


ಈ ದಿಸೆಯಲ್ಲಿ ಕಾನೂನು ಶಿಕ್ಷಣದಲ್ಲಿ ಕನ್ನಡ ಭಾಷೆ ಬಳಸಬೇಕು ಎಂದು ವಿಶ್ವವಿದ್ಯಾನಿಲಯ ಅನುದಾನ ಆಯೋಗ(ಯುಜಿಸಿ)ಗೆ ಅವರು ಪತ್ರ ಬರೆದಿದ್ದಾರೆ.


ಕಾನೂನು ಶಿಕ್ಷಣವನ್ನು ಕನ್ನಡದಲ್ಲಿ ಕಲಿಯಲು ಸಾಧ್ಯತೆಗಳು ಇಲ್ಲದಿರುವುದರಿಂದ ಅಸಂಖ್ಯಾತ ಗ್ರಾಮೀಣ ಪ್ರತಿಭೆಗಳು ನ್ಯಾಯವಾದಿಗಳಾಗುವ ಅವಕಾಶದಿಂದ ವಂಚಿತರಾಗುತ್ತಿದ್ದಾರೆ ಎಂದು ಖೇದ ವ್ಯಕ್ತಪಡಿಸಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು, ಪ್ರಾದೇಶಿಕ ಭಾಷೆಗಳಲ್ಲೂ ಕಾನೂನು ಶಿಕ್ಷಣ ನೀಡುವ ವ್ಯವಸ್ಥೆ ಜಾರಿಗೆ ಬರಬೇಕು ಎಂದು ಪ್ರತಿಪಾದಿಸಿದ್ದಾರೆ.


ಎಲ್‌ಎಲ್‌ಎಂ, ಎಲ್‌ಎಲ್‌ಬಿ ಮತ್ತು ಅದಕ್ಕೆ ಸಂಬಂಧಿಸಿದ ಪಿಎಚ್‌ಡಿ ಪಡೆಯಲು ಕೇವಲ ಇಂಗ್ಲಿಷ್ ಭಾಷೆಯಲ್ಲಿ ಅಭ್ಯಸಿಸುವ ಅವಕಾಶವಿದೆ. ಶಿಕ್ಷಣ ಸಂಸ್ಥೆಗಳು ನಿಯಮಗಳನ್ನು ಉಲ್ಲೇಖಿಸಿ ಆಂಗ್ಲ ಭಾಷೆಯ ಮೇಲೆ ಪ್ರಭುತ್ವ ಹೊಂದದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅವಕಾಶವನ್ನು ನಿರಾಕರಿಸುತ್ತವೆ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.


ಇಂತಹ ನಿಯಮಗಳಿಗೆ ತಿದ್ದುಪಡಿಯನ್ನು ತರುವ ಮೂಲಕ ಅಸಂಖ್ಯಾತ ವಿದ್ಯಾರ್ಥಿಗಳಿಗೆ ಆಶಾಕಿರಣವಾಗಬೇಕು ಎಂದು ಬಿಳಿಮಲೆ ಆಶಯ ವ್ಯಕ್ತಪಡಿಸಿದ್ದಾರೆ.


ತಾಂತ್ರಿಕ ಶಿಕ್ಷಣ ಬೋಧನೆಯಲ್ಲಿ ಕನ್ನಡ ಪಠ್ಯವನ್ನು ರಾಜ್ಯದ ಹಲವು ವಿಶ್ವವಿದ್ಯಾನಿಲಯಗಳು ಅಳವಡಿಸಿಕೊಂಡಿವೆ. ಇದಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಗ್ರಹವೇ ಕಾರಣ ಎಂದು ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.


Ads on article

Advertise in articles 1

advertising articles 2

Advertise under the article