-->
ನಾಡೋಜ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಶ್ರೀ ಎಸ್.ಆರ್. ನಾಯಕ್ ನಿಧನ

ನಾಡೋಜ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಶ್ರೀ ಎಸ್.ಆರ್. ನಾಯಕ್ ನಿಧನ

ನಾಡೋಜ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಶ್ರೀ ಎಸ್.ಆರ್. ನಾಯಕ್ ನಿಧನ








ನಾಡೋಜ ಗೌರವಕ್ಕೆ ಪಾತರಾಗಿದ್ದ ಛತ್ತೀಸ್ ಗಢದ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಮತ್ತು ಕರ್ನಾಟಕ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಶ್ರೀ ಎಸ್ ಆರ್ ನಾಯಕ್ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ರಾಜ್ಯ ಕಾನೂನು ಆಯೋಗ ಹಾಗೂ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಅವರು ಪತ್ನಿ ಶಾಲಿನಿ ಎಸ್ ನಾಯಕ್ ಪುತ್ರ ಡಾ. ಎನ್ ಎಸ್ ನಾಯಕ್, ಪುತ್ರಿ ನಿಶಾ ಗಾಂವ್ಕರ್ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ


80 ವರ್ಷ ವಯಸ್ಸಿನ ಎಸ್ ಆರ್ ನಾಯಕ್ ಅವರು ಕುಮಟಾ ತಾಲೂಕಿನ ಹಳ್ಳಿಯೊಂದರಲ್ಲಿ ಕೃಷಿಕ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಲ್ಲಿ 1945ರಲ್ಲಿ ಜನಿಸಿದ್ದರು. ಬೆಂಗಳೂರು ವಿಶ್ವವಿದ್ಯಾನಿಲಯದ ಕಾನೂನು ಪದವಿ ಹಾಗೂ ಕಾನೂನು ವಿಭಾಗದಲ್ಲಿ ನಾತಕೋತರ ಪದವಿ ಪಡೆದಿದ್ದ ನಾಯಕ್ ಅವರು, ಹಿರಿಯ ವಕೀಲರಾದ ಎಂ ಗೋಪಾಲಕೃಷ್ಣ ಶೆಟ್ಟಿ ಹಾಗೂ ಎಲ್ ಜಿ ಹಾವನೂರು ಅವರ ಬಳಿ ಕಿರಿಯ ವಕೀಲರಾಗಿ ಸೇವೆ ಸಲ್ಲಿಸಿದ್ದರು.


1994ರ ಫೆಬ್ರವರಿ 25ರಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನಿಯುಕ್ತಿಗೊಂಡ ನಂತರ ಆಂಧ್ರಪ್ರದೇಶದ ಹೈಕೋರ್ಟ್ ನ್ಯಾಯಮೂರ್ತಿಯಾಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲಿನ ನ್ಯಾಯಾಂಗ ಅಕಾಡೆಮಿ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ಬಳಿಕ ಛತ್ತೀಸ್ ಗಢದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅವರು ನಿವೃತ್ತರಾದರು.




Ads on article

Advertise in articles 1

advertising articles 2

Advertise under the article

  

  

  

Join our WhatsApp Channel Powered By : Online Pudu