
ವಕೀಲರಿಗೆ ಟೋಲ್ ಶುಲ್ಕ ವಿನಾಯಿತಿ: ರಾಜ್ಯ ವಕೀಲರ ಪರಿಷತ್ತಿನಿಂದ ಕೇಂದ್ರಕ್ಕೆ ಮನವಿ
Sunday, June 29, 2025
ವಕೀಲರಿಗೆ ಟೋಲ್ ಶುಲ್ಕ ವಿನಾಯಿತಿ: ರಾಜ್ಯ ವಕೀಲರ ಪರಿಷತ್ತಿನಿಂದ ಕೇಂದ್ರಕ್ಕೆ ಮನವಿ
ವಕೀಲರಿಗೆ ಟೋಲ್ ಶುಲ್ಕ ವಿನಾಯಿತಿ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದೆ.
ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ಎಸ್. ಎಸ್. ಮಿಟ್ಟಲಕೋಡ್ ಅವರು ಈ ನಿಟ್ಟಿನಲ್ಲಿ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು, ರಾಜ್ಯದ ಎಲ್ಲ ಟೋಲ್ ಪ್ಲಾಜಾಗಳಲ್ಲಿ ವಕೀಲರಿಗೆ ಶುಲ್ಕದಿಂದ ವಿನಾಯಿತಿ ಕಲ್ಪಿಸುವಂತೆ ಕೋರಿದ್ದಾರೆ.
ತಾಲೂಕು ಕೇಂದ್ರಗಳಿಂದ 50 ಕಿ.ಮೀ ಹಾಗೂ ಜಿಲ್ಲಾ ಕೇಂದ್ರಗಳಿಂದ 100 ಕಿ.ಮೀ. ಪರಿಧಿಯಲ್ಲಿ ವೃತ್ತಿ ನಿರತ ವಕೀಲರು ತಮ್ಮ ಅಧಿಕೃತ ಕೆಲಸದ ನಿಮಿತ್ತ ಸಂಚರಿಸುವಾಗ ಅವರ ವಾಹನಗಳಿಗೆ ಟೋಲ್ ಶುಲ್ಕಕ್ಕೆ ವಿನಾಯಿತಿ ನೀಡಬೇಕು ಎಂದು ಅವರು ಪತ್ರದಲ್ಲಿ ಕೋರಿಕೊಂಡಿದ್ದಾರೆ.