-->
ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ ಮಿತಿಗಳಿವೆ: ಮಾನಹಾನಿ ಹೇಳಿಕೆ ನೀಡುವಂತಿಲ್ಲ- ಅಲಹಾಬಾದ್ ಹೈಕೋರ್ಟ್‌

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ ಮಿತಿಗಳಿವೆ: ಮಾನಹಾನಿ ಹೇಳಿಕೆ ನೀಡುವಂತಿಲ್ಲ- ಅಲಹಾಬಾದ್ ಹೈಕೋರ್ಟ್‌

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ ಮಿತಿಗಳಿವೆ: ಮಾನಹಾನಿ ಹೇಳಿಕೆ ನೀಡುವಂತಿಲ್ಲ- ಅಲಹಾಬಾದ್ ಹೈಕೋರ್ಟ್‌





ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ ಕೆಲವು ಮಿತಿಗಳು ಇವೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಅಂದ ಮಾತ್ರಕ್ಕೆ ಭಾರತೀಯ ಸೇನೆ ಅಥವಾ ಯಾವುದೇ ವ್ಯಕ್ತಿಯ ವಿರುದ್ಧ ಮಾನಹಾನಿ ಹೇಳಿಕೆ ನೀಡಬಹುದು ಎಂಬ ಸ್ವಾತಂತ್ರ್ಯವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.


ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ವಿಭಾಗೀಯ ಪೀಠದ ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.


2022ರ ಭಾರತ ಜೋಡೋ ಯಾತ್ರೆಯ ಸಂದರ್ಭದಲ್ಲಿ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನೀಡಲಾದ ಸಮನ್ಸ್‌ನ್ನು ರದ್ದುಪಡಿಸಬೇಕು ಎಂದು ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪೀಠ ತಿರಸ್ಕರಿಸಿದೆ.


ಭಾರತೀಯ ಸೇನೆ ವಿರುದ್ಧ ರಾಹುಲ್ ಗಾಂಧಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ನ್ಯಾಯಪೀಠ ಗಮನಿಸಿತು. ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿ ವಿಚಾರಣಾ ನ್ಯಾಯಾಲಯ ಫೆಬ್ರವರಿ ತಿಂಗಳಲ್ಲಿ ಹೊರಡಿಸಿದ್ದ ಸಮನ್ಸ್ ಆದೇಶವನ್ನು ನ್ಯಾಯಪೀಠ ಎತ್ತಿ ಹಿಡಿಯಿತು.


ಸಂವಿಧಾನದ 19ನೇ ವಿಧಿ ಅಡಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಲಾಗಿದೆ. ಅದರ ಅರ್ಥ ಯಾವುದೇ ವ್ಯಕ್ತಿ ಮತ್ತು ಸೇನೆಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಬಹುದು ಎಂಬುದಲ್ಲ ಎಂಬುದನ್ನು ಆದೇಶದಲ್ಲಿ ಸ್ಪಷ್ಟಪಡಿಸಿದೆ.



Ads on article

Advertise in articles 1

advertising articles 2

Advertise under the article