-->
Family Court: ಜೀವನ ವೆಚ್ಚ, ಬದುಕುವ ರೀತಿ ಪರಿಗಣಿಸಿ ಜೀವನಾಂಶ ಮೊತ್ತ ದುಪ್ಪಟ್ಟು ಮಾಡಿದ ಕರ್ನಾಟಕ ಹೈಕೋರ್ಟ್‌

Family Court: ಜೀವನ ವೆಚ್ಚ, ಬದುಕುವ ರೀತಿ ಪರಿಗಣಿಸಿ ಜೀವನಾಂಶ ಮೊತ್ತ ದುಪ್ಪಟ್ಟು ಮಾಡಿದ ಕರ್ನಾಟಕ ಹೈಕೋರ್ಟ್‌

Family Court: ಜೀವನ ವೆಚ್ಚ, ಬದುಕುವ ರೀತಿ ಪರಿಗಣಿಸಿ ಜೀವನಾಂಶ ಮೊತ್ತ ದುಪ್ಪಟ್ಟು ಮಾಡಿದ ಕರ್ನಾಟಕ ಹೈಕೋರ್ಟ್‌





ವಿಪರೀತವಾಗಿ ಹೆಚ್ಚುತ್ತಿರುವ ಜೀವನ ವೆಚ್ಚ ಹಾಗೂ ಬದಲಾಗುತ್ತಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪತಿಯು ಪತ್ನಿಗೆ ನೀಡುತ್ತಿದ್ದ ಜೀವನಾಂಶ ಮೊತ್ತವನ್ನು 10 ಸಾವಿರ ರೂ.ಗಳಿಂದ 20 ಸಾವಿರ ರೂ.ಗಳಿಗೆ ಏರಿಕೆ ಮಾಡಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.


ತಮಗೆ ಕೌಟುಂಬಿಕ ನ್ಯಾಯಾಲಯದ ಪ್ರಕಾರ ಆದೇಶವಾಗಿರುವ ಜೀವನಾಂಶದ ಮೊತ್ತವನ್ನು ಹೆಚ್ಚಿಸುವಂತೆ ಕೋರಿ ಬೆಂಗಳೂರಿನ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ.


ಬದಲಾಗುತ್ತಿರುವ ಸನ್ನಿವೇಶದಲ್ಲಿ ಪತ್ನಿ ತಾವು ಬದುಕುತ್ತಿರುವ ರೀತಿ, ಏರಿಕೆಯಾಗುತ್ತಿರುವ ಜೀವನ ವೆಚ್ಚ ಮತ್ತಿತರ ವಿವರಗಳನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಕೊಡಬೇಕಿದೆ. ಈ ಅಂಶಗಳನ್ನು ಪರಿಗಣಿಸಿ ಜೀವನಾಂಶ ಮೊತ್ತ ಹೆಚ್ಚಳ ಮಾಡುವ ಬಗ್ಗೆ ಕೋರ್ಟ್‌ಗಳು ತೀರ್ಮಾನಿಸಬೇಕು.


ವಿನೀತಾ ಥಾಮಸ್ ವಿರುದ್ಧ ಪ್ರವೀಣ್ ಕುಮಾರ್ ಬೋರುಸೆಟ್ಟಿ

ಕರ್ನಾಟಕ ಹೈಕೋರ್ಟ್‌: WP 16949/2021, Dated 06-12-2022


"ರೀಮಾ ಸಲ್ಕನ್ ವಿರುದ್ಧ ಸುಮೇರ್ ಸಿಂಗ್ ಸಲ್ಕನ್" ಪ್ರಕರಣದಲ್ಲಿ ಸಿಆರ್‌ಪಿಸಿ ಸೆಕ್ಷನ್ 125ರಡಿ ಒಮ್ಮೆ ಜೀವನಾಂಶ ನಿಗದಿಪಡಿಸಿದ ನಂತರವೂ ಕೋರ್ಟ್‌ಗಳು ಜೀವನ ವೆಚ್ಚ ಏರಿಕೆ ಮಾಡಬಹುದು ಎಂಬ ಸುಪ್ರೀಂಕೋರ್ಟ್‌ನ ಆದೇಶವನ್ನು ಈ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.


ಈ ಪ್ರಕರಣದಲ್ಲಿ ಪತಿಯ ಆದಾಯವು ತಿಂಗಳಿಗೆ 1.5 ಲಕ್ಷದಿಂದ 2 ಲಕ್ಷ ರೂಪಾಯಿ ವರೆಗೆ ಇದೆ. ಆದರೂ, ಕೌಟುಂಬಿಕ ನ್ಯಾಯಾಲಯ ಜೀವನಾಂಶ ಹೆಚ್ಚಳ ಮಾಡಲು ಸಾಧ್ಯವಿಲ್ಲ ಎಂಬುದು ಸಮರ್ಥನೀಯವಲ್ಲ. ಜೀವನ ವೆಚ್ಚ ಹೆಚ್ಚಳ ಮಾಡಲು ಸಾಧ್ಯವಿಲ್ಲ ಎಂದು ಹೇಳಿರುವುದು ಸರಿಯಲ್ಲ ಮತ್ತು ಅದು ಸಮಂಜಸವೂ ಅಲ್ಲ ಎಂದು ನ್ಯಾಯಪೀಠ ಹೇಳಿದೆ.


ಜೀವನ ವೆಚ್ಚ ಹೆಚ್ಚಳ ಸೇರಿದಂತೆ ಹಲವು ಕಾರಣಗಳಿಂದ ಜೀವನಾಂಶ ಹೆಚ್ಚಳ ಮಾಡಬೇಕಾದ ಅನಿವಾರ್ಯತೆ ಕಂಡುಬಂದಿದೆ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ.

Ads on article

Advertise in articles 1

advertising articles 2

Advertise under the article