-->
ಸ್ನೇಹಿತನಾದ ಮಾತ್ರಕ್ಕೆ ಲೈಂಗಿಕ ಸಂಬಂಧ ಮಾಡುವಂತಿಲ್ಲ: ಆರೋಪಿಯ ಜಾಮೀನು ತಿರಸ್ಕರಿಸಿದ ದೆಹಲಿ ಹೈಕೋರ್ಟ್

ಸ್ನೇಹಿತನಾದ ಮಾತ್ರಕ್ಕೆ ಲೈಂಗಿಕ ಸಂಬಂಧ ಮಾಡುವಂತಿಲ್ಲ: ಆರೋಪಿಯ ಜಾಮೀನು ತಿರಸ್ಕರಿಸಿದ ದೆಹಲಿ ಹೈಕೋರ್ಟ್

ಸ್ನೇಹಿತನಾದ ಮಾತ್ರಕ್ಕೆ ಲೈಂಗಿಕ ಸಂಬಂಧ ಮಾಡುವಂತಿಲ್ಲ: ಆರೋಪಿಯ ಜಾಮೀನು ತಿರಸ್ಕರಿಸಿದ ದೆಹಲಿ ಹೈಕೋರ್ಟ್





ಮಹಿಳೆಯ ಸ್ನೇಹಿತನಾಗಿದ್ದಾನೆ ಎಂದ ಮಾತ್ರಕ್ಕೆ ಆಕೆಯ ಜೊತೆಗೆ ಬಲವಂತವಾಗಿ ಲೈಂಗಿಕ ಸಂಬಂಧ ಮಾಡುವಂತಿಲ್ಲ. ಯುವತಿ ಅಪ್ರಾಪ್ತ ವಯಸ್ಕಳಾಗಿದ್ದರೆ, ಸಮ್ಮತಿಯ ಲೈಂಗಿಕ ಸಂಬಂಧವೂ ಕಾನೂನುಬಾಹಿರ ಎಂದು ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದ್ದು, ಆರೋಪಿಯ ಜಾಮೀನು ತಿರಸ್ಕರಿಸಿದೆ.


ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಗಿರೀಶ್ ಕಟ್ಟಾಲಿಯಾ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.


ಬಾಲಕಿಯ ಒಪ್ಪಿಗೆ ಪಡೆದೇ ಆಕೆಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ್ದೇನೆ ಎಂಬ ಆರೋಪಿಯ ಹೇಳಿಕೆಯನ್ನು ನ್ಯಾಯಮೂರ್ತಿ ಗಿರೀಶ್ ಕಟ್ಟಾಲಿಯಾ ತಿರಸ್ಕರಿಸಿದರು. ಆಕೆ ಬಾಲಕಿಯಾಗಿರುವುದರಿಂದ ಸಮ್ಮತಿ ಪಡೆದರೂ ಅದು ಕಾನೂನುಬಾಹಿರ ಎಂದು ನ್ಯಾಯಪೀಠ ಹೇಳಿತು.


ನಯವಾದ ಮಾತುಗಳಿಂದ ಆರೋಪಿಯು ಬಾಲಕಿಯೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದಾನೆ. ಬಾಲಕಿಯ ಒಪ್ಪಿಗೆ ಇಲ್ಲದಿದ್ದರೂ ವ್ಯಕ್ತಿಯು ಹಲವು ಬಾರಿ ಆಕೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬುದನ್ನು ಎಫ್‌ಐಆರ್‌ನಲ್ಲಿ ದಾಖಲಾಗಿದೆ ಎಂಬುದನ್ನು ನ್ಯಾಯಪೀಠ ಒತ್ತಿ ಹೇಳಿತು.


ಹೀಗಾಗಿ, ಇದು ಒಮ್ಮತದ ಸಂಬಂಧ ಎಂದು ನಿರ್ಧರಿಸಲು ಸಾಧ್ಯವಾಗುವುದಿಲ್ಲ. ಆರೋಪಿಗೆ ಜಾಮೀನು ನೀಡಲು ಇದು ಯೋಗ್ಯ ಪ್ರಕರಣವಲ್ಲ ಎಂದು ನ್ಯಾಯಪೀಠ ಆದೇಶ ನೀಡಿತು.


ಪ್ರಕರಣದ ವಿವರ


ವಿಕಾಸಪುರಿಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಅಪ್ರಾಪ್ತ ಬಾಲಕಿಯ ಜೊತೆಗೆ ಬೆಳೆಸಿಕೊಂಡು ಆಕೆ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ.

ಈ ಬಗ್ಗೆ ಬಾಲಕಿ ನೀಡಿರುವ ದೂರಿನ ಮೇಲೆ ಪೊಲೀಸರು ಪ್ರಥಮ ವರ್ತಮಾನ ವರದಿ ದಾಖಲಿಸಿಕೊಂಡಿದ್ದರು.


ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿದ ಪೊಲೀಸರು ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣಾ ನ್ಯಾಯಾಲಯ ಆರೋಪಿಯ ಜಾಮೀನು ನಿರಾಕರಿಸಿದ ಹಿನ್ನೆಲೆಯಲ್ಲಿ ಆರೋಪಿ ಹೈಕೋರ್ಟ್ ಮೆಟ್ಟಿಲೇರಿದ್ದ.


Ads on article

Advertise in articles 1

advertising articles 2

Advertise under the article