
Rash Negligent driving: ಅತಿವೇಗ, ನಿರ್ಲಕ್ಷ್ಯದ ಚಾಲನೆಯಿಂದ ಮೃತಪಟ್ಟ ಸವಾರನ ಕುಟುಂಬಕ್ಕೆ ಪರಿಹಾರವಿಲ್ಲ- ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
Rash Negligent driving: ಅತಿವೇಗ, ನಿರ್ಲಕ್ಷ್ಯದ ಚಾಲನೆಯಿಂದ ಮೃತಪಟ್ಟ ಸವಾರನ ಕುಟುಂಬಕ್ಕೆ ಪರಿಹಾರವಿಲ್ಲ- ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಅತಿ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಸಂಭಿಸಿದ ಅಪಘಾತದಲ್ಲಿ ಚಾಲಕ ಮೃತ ಪಟ್ಟರೆ, ಅಂತಹ ಸಂದರ್ಭದಲ್ಲಿ ಮೃತ ಚಾಲಕನ ಕುಟುಂಬಕ್ಕೆ ಮೋಟಾರ್ ವಾಹನ ಕಾಯ್ದೆ ಅಡಿ ಪರಿಹಾರ ನೀಡಲು ವಿಮಾ ಕಂಪನಿ ಭಾಧ್ಯಸ್ತರಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಸುಪ್ರೀಂ ಕೋರ್ಟ್ ನ ಗೌರವಾನ್ವಿತ ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಆರ್. ಮಹಾದೇವನ್ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಮೇಲ್ಮನವಿದ್ದಾರರು ಸುಪ್ರೀಂ ಕೋರ್ಟಿಗೆ ವಿಶೇಷ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದರು.
ಅಜಾಗರೂಕತೆ ಮತ್ತು ಅತಿ ವೇಗದಿಂದ ಕಾರು ಚಲಾಯಿಸಿದ ಕಾರಣಕ್ಕೆ ಮೃತಪಟ್ಟ ವ್ಯಕ್ತಿಯ ಪತ್ನಿ, ಪುತ್ರ ಹಾಗೂ ಮತ್ತು ಪೋಷಕರು ಕೋರಿದ 80 ಲಕ್ಷ ರೂಪಾಯಿ ಪರಿಹಾರ ನೀಡುವ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ.
ವಿಮಾ ಕಂಪನಿ ಪರಿಹಾರ ನೀಡಬೇಕು ಎಂದು ಕೋರಿ ಮೃತರ ಕಾನೂನುಬದ್ಧ ಉತ್ತರಾಧಿಕಾರಿಗಳು ಅರ್ಜಿಯನ್ನು ಸಲ್ಲಿಸಿದರು. ಈ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿ ಕರ್ನಾಟಕ ಹೈಕೋರ್ಟ್ 2024ರ ನವಂಬರ್ ನಲ್ಲಿ ಆದೇಶ ಹೊರಡಿಸಿತ್ತು. ಈ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು.
ಹೈಕೋರ್ಟ್ ನೀಡಿದ ತೀರ್ಪಿನಲ್ಲಿ ಯಾವುದೇ ದೋಷ ಇಲ್ಲ. ಹಾಗಾಗಿ ನಾವು ಈ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ಅಥವಾ ಹಸ್ತಕ್ಷೇಪ ಮಾಡಲು ಒಲವು ಹೊಂದಿಲ್ಲ. ಈ ಕಾರಣದಿಂದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸುತ್ತಿದ್ದೇವೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಹೇಳಿದೆ.
2016ರ ಜೂನ್ ನಲ್ಲಿ ಮಲ್ಲಸಂದ್ರ ಗ್ರಾಮದಿಂದ ಅರಸೀಕೆರೆ ಪಟ್ಟಣಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿ ಎನ್ ಎಸ್ ರವಿ ಮೃತಪಟ್ಟಿದ್ದರು. ರವೀಶ್ ಅವರ ತಂದೆ, ಸಹೋದರಿ ಹಾಗೂ ಅವರ ಮಕ್ಕಳು ಕಾರಿನಲ್ಲಿದ್ದರು. ರವೀಶ ಅವರು ಕಾರನ್ನು ನಿರ್ಲಕ್ಷ್ಯದಿಂದ ಚಲಾಯಿಸಿದ್ದಾರೆ, ಅವರು ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದರಿಂದ ಕಾರು ರಸ್ತೆಗೆ ಉರುಳಿ ಬಿದ್ದಿತ್ತು. ಈ ಅಪಘಾತದಿಂದ ತೀವ್ರ ಸ್ವರೂಪದ ಗಾಯಗಳು ಗಾಯಗೊಂಡು ಅವರು ಮೃತಪಟ್ಟಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿತ್ತು.
ಅತಿ ವೇಗ ಮತ್ತು ನಿರ್ಲಕ್ಷದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂಬುದು ನ್ಯಾಯಾಲಯದ ವಿಚಾರಣೆಯಲ್ಲಿ ನಿರೂಪಿತವಾದ ಹಿನ್ನೆಲೆಯಲ್ಲಿ ಅವರ ಕುಟುಂಬದವರಿಗೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು.