
ಕರ್ನಾಟಕ ಸಹಿತ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ: ರಾಜ್ಯದ ಸಿಜೆ ಆಗಿ ವಿಭು ಬಖ್ರು
ಕರ್ನಾಟಕ ಸಹಿತ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ: ರಾಜ್ಯದ ಸಿಜೆ ಆಗಿ ವಿಭು ಬಖ್ರು
ಕರ್ನಾಟಕ ಸಹಿತ ಐದು ರಾಜ್ಯಗಳ ಹೈಕೋರ್ಟ್‌ಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕವಾಗಿದೆ. ಕರ್ನಾಟಕದ ಮುಖ್ಯ ನ್ಯಾಯಮೂರ್ತಿಗಳಾಗಿ ವಿಭು ಬಖ್ರು ಅವರನ್ನು ನೇಮಿಸಲಾಗಿದೆ.
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಸಂವಿಧಾನ ಪ್ರದತ್ತ ಅಧಿಕಾರ ಬಳಸಿ ಈ ನೇಮಕದ ಆದೇಶದ ಹೊರಡಿಸಿದ್ದಾರೆ.
ಕರ್ನಾಟಕ ಹೈಕೋರ್ಟ್ ಜೊತೆಯಲ್ಲೇ ಮಧ್ಯಪ್ರದೇಶ, ಜಾರ್ಖಂಡ್, ಗುವಾಹಟಿ ಮತ್ತು ಪಟ್ನಾ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ಹೆಸರನ್ನು ಅಂತಿಮಗೊಳಿಸಿ ಆದೇಶ ಹೊರಡಿಸಲಾಗಿದೆ.
ವಿವಿಧ ರಾಜ್ಯಗಳ ಹೈಕೋರ್ಟ್ ನೇಮಕವಾದ ಮುಖ್ಯ ನ್ಯಾಯಮೂರ್ತಿಗಳ ವಿವರ
ಕರ್ನಾಟಕ: ವಿಭು ಬಖ್ರು
ಮಧ್ಯಪ್ರದೇಶ: ನ್ಯಾಯಮೂರ್ತಿ ಸಂಜೀವ್ ಸಚ್‌ದೇವ್
ಜಾರ್ಖಂಡ್: ತಾರಾಲೋಕ್ ಸಿಂಗ್ ಚೌಹಾಣ್
ಗುವಾಹಟಿ: ಅಶುತೋಷ್ ಕುಮಾರ್
ಪಟ್ನಾ: ವಿಫುಲ್ ಮನುಭಾಯ್ ಪಾಂಚೋಲಿ
ವಿಭು ಬಖ್ರು: ಒಂದು ಕಿರು ಪರಿಚಯ
1966ರಲ್ಲಿ ನಾಗಪುರದಲ್ಲಿ ಜನಿಸಿದ ವಿಭು ಬಖ್ರು ಅವರು ದೆಹಲಿ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಣ ಪಡೆದು, ದೆಹಲಿ ವಿಶ್ವವಿದ್ಯಾನಿಲಯದ ವಾಣಿಜ್ಯ ವಿಷಯದ ಪದವಿ ಪಡೆದರು. 1989ರಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿಯೂ ಅರ್ಹತೆ ಪಡೆದರು. 1990ರಲ್ಲಿ ಎಲ್‌ಎಲ್‌ಬಿ ಪದವಿ ಪಡೆದು ಅದೇ ವರ್ಷ ದೆಹಲಿ ವಕೀಲರ ಪರಿಷತ್‌ನಲ್ಲಿ ವಕೀಲರಾಗಿ ನೋಂದಣಿ ಮಾಡಿಕೊಂಡರು.
ನ್ಯಾ. ಬಖ್ರು ಅವರು ವಕೀಲರಾಗಿದ್ದ ಅವಧಿಯಲ್ಲಿ ಸುಪ್ರೀಂ ಕೋರ್ಟ್ ಮತ್ತು ದೆಹಲಿ ಹೈಕೋರ್ಟ್‌ನಲ್ಲಿ ಕಂಪೆನಿ ಕಾನೂನು ಮಂಡಳಿ ಮತ್ತು ಇತರೆ ನ್ಯಾಯಮಂಡಳಿಗಳಲ್ಲಿ ವಕೀಲಿದೆ ಮಾಡಿದ್ಧಾರೆ.
2011ರಲ್ಲಿ ಹಿರಿಯ ವಕೀಲರಾಗಿ ಅವರು ಪದೋನ್ನತಿ ಪಡೆದಿದ್ದರು.
2013ರಲ್ಲಿ ದೆಹಲಿ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡು 2015ರಲ್ಲಿ ಖಾಯಂ ನ್ಯಾಯಮೂರ್ತಿಯಾದರು.