ಮಹಾರಾಷ್ಟ್ರದ ಬಿಜೆಪಿ ಮಾಜಿ ವಕ್ತಾರೆ ಈಗ ಬಾಂಬೆ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿ
ಮಹಾರಾಷ್ಟ್ರದ ಬಿಜೆಪಿ ಮಾಜಿ ವಕ್ತಾರೆ ಈಗ ಬಾಂಬೆ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿ
ಮಹಾರಾಷ್ಟ್ರ ಬಿಜೆಪಿಯ ಮಾಜಿ ವಕ್ತಾರ ಆರತಿ ಸಾಥೆ ಅವರಿಗೆ ಅದೃಷ್ಟ ಒಲಿದು ಬಂದಿದೆ. ಅವರನ್ನು ಬಾಂಬೆ ಹೈಕೋರ್ಟ್ ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿದೆ.
ಅಜಿತ್ ಕಡೇಹಂಕರ್, ಆರತಿ ಸಾಥೆ ಮತ್ತು ಸುಶೀಲ್ ಘೋಡೇಶ್ವರ್ ಅವರನ್ನು ಬಾಂಬೆ. ಹೈಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡುವ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಅನುಮೋದನೆ ನೀಡಿದೆ.
2023ರ ಫೆಬ್ರವರಿಯಲ್ಲಿ ಆರತಿ ಸಾಥೆ ಅವರನ್ನು ಮಹಾರಾಷ್ಟ್ರ ಬಿಜೆಪಿಯ ಅಧಿಕೃತ ವಕ್ತಾರರನ್ನಾಗಿ ನೇಮಕ ಮಾಡಲಾಗಿತ್ತು. ಇದಾದ ಸುಮಾರು ಒಂದು ವರ್ಷದ ನಂತರ ಜನವರಿ 2024 ರಲ್ಲಿ ಅವರು "ವೈಯಕ್ತಿಕ ಮತ್ತು ವೃತ್ತಿಪರ ಕಾರಣಗಳನ್ನು" ನೀಡಿ ಈ ಹುದ್ದೆಗೆ ಮತ್ತು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.
ಈ ಘಟನೆಯ ಸರಿ ಸುಮಾರು 19 ತಿಂಗಳ ನಂತರ ನ್ಯಾಯಾಂಗದ ಉನ್ನತ ಹುದ್ದೆ ಒಲಿದುಬಂದಿದೆ. 2025ರ ಜುಲೈ 28ರಂದು ಸುಪ್ರೀಂ ಕೋರ್ಟ್‌ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ, ಆರತಿ ಸಾಠ ಸೇರಿದಂತೆ ಮೂವರನ್ನು ಬಾಂಬೆ ಹೈಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಿಸಲು ಶಿಫಾರಸು ಮಾಡಿದೆ.
ಆದರೆ, ಈ ನೇಮಕ ರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ.