
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಬೃಹತ್ ನೇಮಕಾತಿ: 6,589 ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ಎಸ್‌ಬಿಐ ಅರ್ಜಿ ಆಹ್ವಾನ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಬೃಹತ್ ನೇಮಕಾತಿ: 6,589 ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ಎಸ್‌ಬಿಐ ಅರ್ಜಿ ಆಹ್ವಾನ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಬೃಹತ್ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ಬಾರಿ 6,589 ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ಎಸ್‌ಬಿಐ ಅರ್ಜಿ ಆಹ್ವಾನ ಮಾಡಲಾಗಿದೆ.
10 ಸಾವಿರಕ್ಕೂ ಹೆಚ್ಚು ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದ ವಾರದ ಬಳಿಕ ಈಗ ದೇಶದ ಮುಂಚೂಣಿ ಬ್ಯಾಂಕ್ 'ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ' (ಎಸ್‌ಬಿಐ) ಕ್ಲರಿಕಲ್ ಕೇಡರ್‌ನ ಜೂನಿಯರ್ ಅಸೋಸಿಯೇಟ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ.
ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಈಗಾಗಲೇ ಆರಂಭಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 26, 2025ರಂದು ಕೊನೆಯ ದಿನವಾಗಿದೆ.
ಬ್ಯಾಂಕ್‌ನ ಗ್ರಾಹಕರ ಸಹಾಯ ಮತ್ತು ಮಾರಾಟ ವಿಭಾಗದಲ್ಲಿ ಒಟ್ಟು 6,589 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಇದರಲ್ಲಿ ಕರ್ನಾಟಕದಲ್ಲಿ 198 ಬ್ಯಾಕ್‌ಲ್ಯಾಗ್ ಹುದ್ದೆಗಳೂ ಸೇರಿದಂತೆ ಒಟ್ಟು 468 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಹೆಚ್ಚಿನ ವಿವರಗಳಿಗೆ ಎಸ್‌ಬಿಐನ ಅಧಿಕೃತ ವೆಬ್‌ಸೈಟ್ ವೀಕ್ಷಿಸಬಹುದು..