-->
ಬಲು ಅಪರೂಪದ ಪ್ರಕರಣದಲ್ಲಿ ಮಾತ್ರ ಮರಣದಂಡನೆ ಶಿಕ್ಷೆ: ಹೈಕೋರ್ಟ್, ವಿಚಾರಣಾ ನ್ಯಾಯಾಲಯಗಳಿಗೆ ತಾಕೀತು ಮಾಡಿದ ಸುಪ್ರೀಂ ಕೋರ್ಟ್‌

ಬಲು ಅಪರೂಪದ ಪ್ರಕರಣದಲ್ಲಿ ಮಾತ್ರ ಮರಣದಂಡನೆ ಶಿಕ್ಷೆ: ಹೈಕೋರ್ಟ್, ವಿಚಾರಣಾ ನ್ಯಾಯಾಲಯಗಳಿಗೆ ತಾಕೀತು ಮಾಡಿದ ಸುಪ್ರೀಂ ಕೋರ್ಟ್‌

ಬಲು ಅಪರೂಪದ ಪ್ರಕರಣದಲ್ಲಿ ಮಾತ್ರ ಮರಣದಂಡನೆ ಶಿಕ್ಷೆ: ಹೈಕೋರ್ಟ್, ವಿಚಾರಣಾ ನ್ಯಾಯಾಲಯಗಳಿಗೆ ತಾಕೀತು ಮಾಡಿದ ಸುಪ್ರೀಂ ಕೋರ್ಟ್‌





ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯಗಳು ಅಪರಾಧಿಯನ್ನು ಮರಣದಂಡನೆ ಶಿಕ್ಷೆಗೆ ಗುರಿಪಡಿಸುವ ಮೊದಲು ವಸ್ತುಸ್ಥಿತಿಯನ್ನು ಸೂಕ್ಷ್ಮವಾಗಿ ಸಮಾಧಾನಚಿತ್ತದಿಂದ ಪರಿಶೀಲಿಸಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ


ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ವಿಕ್ರಮ್‌ನಾಥ್, ಸಂಜಯ್ ಕರೋಲ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಅಭಿಪ್ರಾಯ ದಾಖಲಿಸಿದೆ.


2014ರಲ್ಲಿ ಬಾಲಕಿ ಮೇಲೆ ದೌರ್ಜನ್ಯ ಎಸಗಿದ್ದ ಅಖ್ತರ್ ಅಲಿಗೆ ಮರಣದಂಡನೆ ಮತ್ತು ಪ್ರೇಮ್ ಪಾಲ್ ವರ್ಮಾನಿಗೆ ಜೀವಾವಧಿ ಶಿಕ್ಷೆ ನೀಡಿದ್ದ ನೈನಿತಾಲ್ ವಿಚಾರಣಾ ನ್ಯಾಯಾಲಯ ಶಿಕ್ಷೆಯನ್ನು ರದ್ದುಪಡಿಸಿದೆ. ವಿಚಾರಣಾ ನ್ಯಾಯಾಲಯದ ತೀರ್ಪನ್ನು ಉತ್ತರಾಖಂಡ್ ಹೈಕೋರ್ಟ್ ಎತ್ತಿಹಿಡಿದಿತ್ತು.


ಪ್ರಾಸಿಕ್ಯೂಷನ್ ದೋಷಾರೋಪಣೆ ಮಾಡಲು ಸಾಧ್ಯವಾಗದೇ ಇದ್ದಾಗ ಹಾಗೂ ನ್ಯಾಯಸಮ್ಮತವೂ ಸಮರ್ಥನೀಯವೂ ಆದ ಸಾಕ್ಷ್ಯಗಳನ್ನು ಒದಗಿಸಿದಾಗ ಅಪರೂಪದಲ್ಲಿ ಅಪರೂಪ ಎನ್ನುವಂತಹ ಪ್ರಕರಣಗಳಲ್ಲಿ ಮಾತ್ರ ಮರಣದಂಡನೆ ವಿಧಿಸಬಹುದು ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ.


'ಶರದ್ ಬಿರ್ದಿಚಂದ್ ಶರ್ದ ವಿರುದ್ಧ ಮಹಾರಾಷ್ಟ್ರ ರಾಜ್ಯ' ಪ್ರಕರಣದಲ್ಲಿ ನೀಡಲಾದ ಮಾರ್ಗದರ್ಶಿ ಸೂತ್ರಗಳಂತೆ ಸಾಂದರ್ಭಿಕ ಸಾಕ್ಷ್ಯಗಳ ಆಧಾರದ ಮೇಲೆ ಪ್ರಕರಣಗಳಿಗೆ ಅಗತ್ಯವಿರುವ ಕಠಿಣ ಮಾನದಂಡಗಳನ್ನು ಅನ್ವಯಿಸಬೇಕು ಎಂದು ನ್ಯಾಯಪೀಠ ಹೇಳಿದೆ.


ಪ್ರಕರಣ: ಅಖ್ತರ್ ಅಲಿ ಆಲಿಯಾಸ್ ಅಲಿ ಅಖ್ತರ್ ವಿರುದ್ಧ ಉತ್ತರಾಖಂಡ್ ರಾಜ್ಯ

ಸುಪ್ರೀಂ ಕೋರ್ಟ್ (Citation: 2025 INSC 1097) Dated 10-09-2025

Ads on article

Advertise in articles 1

advertising articles 2

Advertise under the article