-->
ಮಕ್ಕಳ ಬಯೋಮೆಟ್ರಿಕ್ ಆಧಾರ್ ಅಪ್‌ಡೇಟ್: ವರ್ಷದ ಮಟ್ಟಿಗೆ ಶುಲ್ಕ ಮನ್ನಾ

ಮಕ್ಕಳ ಬಯೋಮೆಟ್ರಿಕ್ ಆಧಾರ್ ಅಪ್‌ಡೇಟ್: ವರ್ಷದ ಮಟ್ಟಿಗೆ ಶುಲ್ಕ ಮನ್ನಾ

ಮಕ್ಕಳ ಬಯೋಮೆಟ್ರಿಕ್ ಆಧಾರ್ ಅಪ್‌ಡೇಟ್: ವರ್ಷದ ಮಟ್ಟಿಗೆ ಶುಲ್ಕ ಮನ್ನಾ





ಆಧಾರ್ ಕಾರ್ಡ್‌ನಲ್ಲಿ ಮಕ್ಕಳ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಲು ವಿಧಿಸಲಾಗುತ್ತಿದ್ದ ಶುಲ್ಕವನ್ನು ವರ್ಷದ ಮಟ್ಟಿಗೆ ಮನ್ನಾ ಮಾಡಲಾಗಿದೆ ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ಶನಿವಾರ ತಿಳಿಸಿದೆ.


ಅಕ್ಟೋಬರ್ 1ರಿಂದ ಇದು ಜಾರಿಗೆ ಬಂದಿದ್ದು, ಒಂದು ವರ್ಷದವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ಪ್ರಾಧಿಕಾರ ಪ್ರಕಟಣೆಯಲ್ಲಿ ಹೇಳಿದೆ.


ಮಕ್ಕಳ 'ಕಡ್ಡಾಯ ಬಯೊಮೆಟ್ರಿಕ್ ನವೀಕರಣ'ಕ್ಕೆ (ಎಂಬಿಯು) ಶುಲ್ಕ ಮನ್ನಾ ಮಾಡಿರುವುದರಿಂದ 6 ಕೋಟಿ ಮಕ್ಕಳಿಗೆ ಪ್ರಯೋಜನವಾಗಲಿದೆ ಎಂದು ಅದು ತಿಳಿಸಿದೆ.


ಐದು ವರ್ಷದೊಳಗಿನ ಮಕ್ಕಳ ಭಾವಚಿತ್ರ, ಹೆಸರು, ಜನ್ಮ ದಿನಾಂಕ, ಲಿಂಗ, ವಿಳಾಸ ಮತ್ತು ಜನನ ಪ್ರಮಾಣ ಪತ್ರವನ್ನು ಒದಗಿಸಿ ಅಧಾರ್‌ಗೆ ನೋಂದಾಯಿಸಬಹುದು. ಈ ವಯಸ್ಸಿನ ಮಕ್ಕಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಪಾಪೆ (ಐರಿಸ್) ಅಷ್ಟಾಗಿ ಬೆಳವಣಿಗೆಯಾಗಿರುವುದಿಲ್ಲ. ಹೀಗಾಗಿ ಅವರ ಸಂಪೂರ್ಣ ಬಯೋಮೆಟ್ರಿಕ್ ದಾಖಲಿಸಲು ಆಗುವುದಿಲ್ಲ.


ಹಾಲಿ ನಿಯಮದ ಪ್ರಕಾರ ಮಕ್ಕಳಿಗೆ ಐದು ವರ್ಷಗಳು ತುಂಬಿದ ಬಳಿಕ ಅವರ ಬೆರಳಚ್ಚು, ಕಣ್ಣಿನ ಪಾಪೆ ಮತ್ತು ಭಾವಚಿತ್ರಗಳನ್ನು ಆಧಾರ್‌ನಲ್ಲಿ ಅಪ್‌ಡೇಟ್ ಮಾಡಬೇಕು. ಆ ಮಕ್ಕಳು 15ರಿಂದ 17ರ ನಡುವಿನ ವಯಸ್ಸಿನಲ್ಲಿ ಇರುವಾಗ ಎರಡನೇ ಬಾರಿಗೆ ಅವುಗಳನ್ನು ಅಪ್‌ಡೇಟ್ ಮಾಡಬೇಕು.


ಹೀಗೆ 5ರಿಂದ 7 ವರ್ಷ ಮತ್ತು 15ರಿಂದ 17 ವರ್ಷದ ನಡುವಿನ ಮಕ್ಕಳ ಬಯೋಮೆಟ್ರಿಕ್ ಅಪ್‌ಡೇಟ್‌ಗೆ ಈಗ ಶುಲ್ಕ ವಿಧಿಸುವುದಿಲ್ಲ. ಆ ನಂತರ ಪ್ರತಿ ಅಪ್‌ಡೇಟ್‌ಗೆ ₹125 ವಿಧಿಸಲಾಗುತ್ತದೆ ಎಂದು ಪ್ರಾಧಿಕಾರ ಹೇಳಿದೆ.


ಪ್ರಾಧಿಕಾರದ ಈ ನಿರ್ಧಾರದಿಂದ 5ರಿಂದ 17 ವರ್ಷದೊಳಗಿನ ಎಲ್ಲ ಮಕ್ಕಳಿಗೂ 'ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್' ವರ್ಷದ ಮಟ್ಟಿಗೆ ಉಚಿತವಾಗಿದೆ ಎಂದು ಪ್ರಕಟಣೆ ತಿಳಿಸಿದೆ.


Ads on article

Advertise in articles 1

advertising articles 2

Advertise under the article