
ಕರ್ನಾಟಕದ ಮಾಹಿತಿ ಆಯುಕ್ತರ ನೇಮಕ: ಮೂರು ಹುದ್ದೆಗೆ ನೇಮಕಾತಿ ಅಂತಿಮ
Wednesday, October 8, 2025
ಕರ್ನಾಟಕದ ಮಾಹಿತಿ ಆಯುಕ್ತರ ನೇಮಕ: ಮೂರು ಹುದ್ದೆಗೆ ನೇಮಕಾತಿ ಅಂತಿಮ
ಕರ್ನಾಟಕದ ರಾಜ್ಯ ಮಾಹಿತಿ ಆಯೋಗದಲ್ಲಿ ಖಾಲಿ ಇರುವ ಮೂರು ಹುದ್ದೆಗೆ ಆಯುಕ್ತರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ.
ಆಯ್ಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಮೂರು ಹುದ್ದೆಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ.
ನಿವೃತ್ತ ಐಎಎಸ್ ಅಧಿಕಾರಿ ವಿನ್ಸೆಂಟ್ ಡಿಸೋಜಾ, ಹಿರಿಯ ಪತ್ರಕರ್ತ ವೆಂಕಟಸಿಂಗ್ ಹಾಗೂ ಮಹೇಶ್ ವಾಲ್ವೇಕರ್ ಅವರ ಹೆಸರು ಬಹುತೇಕ ಅಂತಿಮಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಆರ್.ಅಶೋಕ್, ಕಾನೂನು ಸಚಿವ ಎಚ್. ಕೆ. ಪಾಟೀಲ್ ಅವರು ಪಾಲ್ಗೊಂಡಿದ್ದರು.
ಕರ್ನಾಟಕ ರಾಜ್ಯ ಮಾಹಿತಿ ಆಯೋಗದಲ್ಲಿ ಮೂರು ಮಾಹಿತಿ ಆಯುಕ್ತರ ಹುದ್ದೆಗಳು ಖಾಲಿ ಇತ್ತು. ಇದೀಗ ಭರ್ತಿಯಾಗಿರುವುದರಿಂದ ಮಾಹಿತಿ ಆಯೋಗಕ್ಕೆ ಬಲ ಬಂದಂತಾಗಿದೆ.