.jpg)
ಸಿವಿಲ್ ನ್ಯಾಯಾಧೀಶರ ನೇಮಕಾತಿ: ಲಿಖಿತ ಪರೀಕ್ಷೆಗೆ ಕೃತಕ ಬುದ್ದಿಮತ್ತೆ ಬಳಕೆ
ಸಿವಿಲ್ ನ್ಯಾಯಾಧೀಶರ ನೇಮಕಾತಿ: ಲಿಖಿತ ಪರೀಕ್ಷೆಗೆ ಕೃತಕ ಬುದ್ದಿಮತ್ತೆ ಬಳಕೆ
ಅಕ್ಟೋಬರ್ 11ರಂದು ನಡೆದ ಸಿವಿಲ್ ನ್ಯಾಯಾಧೀಶರ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಕೃತಕ ಬುದ್ದಿಮತ್ತೆ ಬಳಕೆ ಮಾಡಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದೃಢಪಡಿಸಿದೆ.
ರಾಜಧಾನಿ ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಪರೀಕ್ಷಾ ಕೇಂದ್ರಗಳಲ್ಲಿ ಮೂರು ನಗರಗಳ ಒಟ್ಟು 21 ಕೇಂದ್ರಗಳಲ್ಲಿ ಸಿವಿಲ್ ನ್ಯಾಯಾಧೀಶರ ಪರೀಕ್ಷೆ ನಡೆಯಿತು. ಈ ಹುದ್ದೆ ಬಯಸಿ ಅರ್ಜಿ ಸಲ್ಲಿಸಿದ್ದ ಅರ್ಹ ಅಭ್ಯರ್ಥಿಗಳ ಸಂಖ್ಯೆ 10,069 ಆಗಿತ್ತು. ಇಷ್ಟು ಮಂದಿಯ ಪೈಕಿ 8,408 ಮಂದಿ ಪರೀಕ್ಷೆಗೆ ಹಾಜರಾಗಿದ್ದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ರಾಜ್ಯದ ಸಿವಿಲ್ ನ್ಯಾಯಾಧೀಶರ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆಸಿತು ಎಂದು ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
''ಮುಖ ಚಹರೆ ಪತ್ತೆ ತಂತ್ರಜ್ಞಾನದ ಮೂಲಕ ಅಭ್ಯರ್ಥಿಗಳನ್ನು ತಪಾಸಣೆ ನಡೆಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ, ಕಲ್ಪಿಸಲಾಯಿತು. ಬ್ಲೂಟೂತ್ ಇತ್ಯಾದಿ ಡಿಜಿಟಲ್ ಸಾಧನಗಳು ಕಾರ್ಯ ನಿರ್ವಹಿಸದಂತೆ ಪರೀಕ್ಷಾ ಕೇಂದ್ರಗಳ ಸುತ್ತ ಜಾಮರ್‌ಗಳನ್ನು ಅಳವಡಿಸ ಲಾಗಿತ್ತು.
ಇಡೀ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿನ ಕಮಾಂಡ್ ಸೆಂಟರ್ ಮೂಲಕ ನಿರ್ವಹಿಸಲಾಯಿತು. ಪರೀಕ್ಷಾ ಕೊಠಡಿಗಳಲ್ಲಿ ಅಳವಡಿಸಿದ್ದ ಕ್ಯಾಮರಾಗಳ ಮೂಲಕ ಕಟ್ಟುನಿಟ್ಟಿನ ನಿಗಾ ವಹಿಸಿತ್ತು.
ಈ ಪ್ರಕ್ರಿಯೆಯಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಅನು ಶಿವರಾಂ, ರಿಜಿಸ್ಟ್ರಾರ್ ಚಂದ್ರಕಲಾ ಖುದ್ದು ಹಾಜರಿದ್ದು ವೀಕ್ಷಣೆ ಮಾಡಿದರು ಎಂದು ಅವರು ಹೇಳಿದ್ದಾರೆ.