-->
ಸಹಕಾರ ಸಂಘಗಳೂ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ವ್ಯಾಪ್ತಿಗೆ: ಕರ್ನಾಟಕ ಹೈಕೋರ್ಟ್ ತೀರ್ಪು

ಸಹಕಾರ ಸಂಘಗಳೂ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ವ್ಯಾಪ್ತಿಗೆ: ಕರ್ನಾಟಕ ಹೈಕೋರ್ಟ್ ತೀರ್ಪು

ಸಹಕಾರ ಸಂಘಗಳೂ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ವ್ಯಾಪ್ತಿಗೆ: ಕರ್ನಾಟಕ ಹೈಕೋರ್ಟ್ ತೀರ್ಪು





ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಆರ್ಥಿಕ ನೆರವು ಪಡೆದುಕೊಳ್ಳುವ ಎಲ್ಲ ಸಹಕಾರಿ ಸಂಘಗಳು, ಅದರ ಸಿಬ್ಬಂದಿ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯ ವ್ಯಾಪ್ತಿಗೆ ಬರುತ್ತಾರೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.


ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ.


ಪ್ರಕರಣದ ವಿವರ:

ಹಾಸನ ಜಿಲ್ಲೆಯ ಹಿರೇಕಡಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಸಿ. ಎ. ಕೀರ್ತಿ ಕುಮಾರ್ ವಿರುದ್ಧ ತನಿಖೆಗೆ ಅನುಮತಿ ನಿರಾಕರಿಸಿ ನಿರ್ಣಯ ಕೈಗೊಂಡಿದ್ದ ಸಂಘದ ನಿರ್ಧಾರವನ್ನು ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಈ ಆದೇಶ ನೀಡಿದೆ.


ಸಂಘದ ಕಾರ್ಯದರ್ಶಿ ಸಿ. ಎ. ಕೀರ್ತಿ ಕುಮಾರ್ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಲು ಅನುಮತಿ ನೀಡುವಂತೆ ನ್ಯಾಯಾಲಯವು ಸಂಘಕ್ಕೆ ನಿರ್ದೇಶನ ನೀಡಿದೆ. ವಾದ-ಪ್ರತಿವಾದ ಆಲಿಸಿ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಪೀಠ ಈ ತೀರ್ಪು ಪ್ರಕಟಿಸಿದೆ.


"ಸಹಕಾರಿ ಸಂಘವು ಸರಕಾರಿ ಸಂಸ್ಥೆಯಲ್ಲ. ಆದರೆ, ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯ ಸೆಕ್ಷನ್ 2 (ಸಿ)ರಲ್ಲಿ ತಿಳಿಸಿರುವಂತೆ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಹಣಕಾಸಿನ ನೆರವು ಪಡೆಯುವ ಕೃಷಿ, ಕೈಗಾರಿಕೆ, ಬ್ಯಾಂಕಿಂಗ್, ವ್ಯಾಪಾರದಲ್ಲಿ ತೊಡಗಿಕೊಂಡಿದ್ದರೆ, ಅಂತಹ ಸಹಕಾರಿ ಸಂಘದ ಅಧ್ಯಕ್ಷ, ಕಾರ್ಯದರ್ಶಿ ಅಥವಾ ಇತರೆ ಪದಾಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಬಹುದು'' ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.


ಸದ್ರಿ ಪ್ರಕರಣದಲ್ಲಿ ಪ್ರತಿವಾದಿ ಸಂಘವು 2014ರ ಮಾರ್ಚ್‌ 31ರಂದು 15,900 ರೂ. ಷೇರು ಮೊತ್ತ, ಪುನರ್ವಸತಿ ನಿಧಿಯಾಗಿ ರೂ. 13,31,107 ಮತ್ತು ರೂ 1,01,166 ನೆರವನ್ನು ಕೇಂದ್ರ ಸರಕಾರದಿಂದ ಪಡೆದುಕೊಂಡಿದೆ. ಅದೇ ರೀತಿ, 2003-04ರಿಂದ 2013-14ವರೆಗೆ ರಾಜ್ಯ ಸರಕಾರದಿಂದ ಸಹಾಯದ ರೂಪದಲ್ಲಿ ಸಾಕಷ್ಟು ನೆರವು ಪಡೆದುಕೊಂಡಿದೆ. ಹಾಗಾಗಿ ಸಂಘದ ಕಾರ್ಯದರ್ಶಿಯನ್ನು ಸಾರ್ವಜನಿಕ ಸೇವಕನಲ್ಲವೆಂದು ಹೇಳಲಾಗದು'' ಎಂದು ತೀರ್ಪಿನಲ್ಲಿ ಹೇಳಲಾಗಿದೆ.


"ಸಹಕಾರಿ ಸಂಘದ ಕಾರ್ಯದರ್ಶಿ ಸಿ.ಎ. ಕೀರ್ತಿ ಕುಮಾರ್ ಅವರ ವಿರುದ್ಧ ಪ್ರಕರಣ ದಾಖಲಿಸುವ ಸಂಬಂಧ ಸಂಘವು ಕೈಗೊಂಡಿರುವ ನಿರ್ಣಯ ವಿವೇಚನಾರಹಿತವಾಗಿದೆ. ಸಂಘವು ರಾಜ್ಯ ಸರಕಾರದಿಂದ ಯಾವುದೇ ಹಣಕಾಸಿನ ನೆರವು ಪಡೆದಿಲ್ಲ. ಹಾಗಾಗಿ ಸಂಘದ ಕಾರ್ಯದರ್ಶಿ ಸಾರ್ವಜನಿಕ ನೌಕರನಲ್ಲ ಎಂದು ಕಣ್ಣು ಮುಚ್ಚಿಕೊಂಡು ನಿರ್ಣಯ ಕೈಗೊಂಡಿದೆ. ಆದ್ದರಿಂದ ಈ ನಿರ್ಣಯ ದೋಷಪೂರಿತವಾಗಿದ್ದು, ರದ್ದುಗೊಳಿಸಲಾಗುತ್ತಿದೆ" ಎಂದು ನ್ಯಾಯಪೀಠ ತೀರ್ಪು ಪ್ರಕಟಿಸಿದೆ.


"ಸಹಕಾರಿ ಸಂಘದ ಕಾರ್ಯದರ್ಶಿ ಕೀರ್ತಿ ಕುಮಾರ್ ವಿರುದ್ಧ ತನಿಖೆಗೆ ಅನುಮತಿ ನೀಡುವ ವಿಚಾರವನ್ನು ಸಂಘಕ್ಕೆ ಮರಳಿಸುತ್ತಿದ್ದೇವೆ. ಮುಂದಿನ ಒಂದು ತಿಂಗಳಲ್ಲಿ ಅವರ ವಿರುದ್ಧ ತನಿಖೆಗೆ ಅನುಮತಿ ನೀಡುವ ಸಂಬಂಧ ನಿರ್ಣಯ ಕೈಗೊಳ್ಳಬೇಕು'' ಎಂದು ನ್ಯಾಯಪೀಠ ತಾಕೀತು ಮಾಡಿದೆ.


Ads on article

Advertise in articles 1

advertising articles 2

Advertise under the article