
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದ ಸರ್ಕಾರ
Wednesday, October 15, 2025
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದ ಸರ್ಕಾರ
ದೀಪಾವಳಿಯ ಹೊಸ್ತಿಲಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ಸರ್ಕಾರಿ ನೌಕರರ ತುಟ್ಟಿ ತುಟ್ಟಿಭತ್ಯೆಯನ್ನು ಶೇಕಡಾ 2ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಈ ಆದೇಶ 2025ರ ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ಈ ಆದೇಶ ಜಾರಿಗೆ ಬರಲಿದೆ.
2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರಕಾರಿ ನೌಕರರಿಗೆ 2025ರ ಜುಲೈ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರವನ್ನು
ಪ್ರಸ್ತುತ ಮೂಲ ವೇತನದ ಶೇಕಡಾ 12.25ರಿಂದ ಶೇ.14.25ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲು ರಾಜ್ಯ ಸರಕಾರ ತೀರ್ಮಾನಿಸಿದೆ. ಅದಕ್ಕೆ ಪೂರಕವಾಗಿ ಆದೇಶ ಹೊರಡಿಸಿದೆ.