ಹೈಕೋರ್ಟ್ ನ್ಯಾಯಮೂರ್ತಿ ಹೆಸರಿನಲ್ಲಿ ವಂಚನೆ: ನಕಲಿ ನೇಮಕಾತಿ ಮಾಡುವುದಾಗಿ ಲಕ್ಷಾಂತರ ರೂ. ವಂಚನೆ- ಎರಡನೇ ಆರೋಪಿ ಮಹಿಳೆ ಪೊಲೀಸ್ ಬಲೆಗೆ
ಹೈಕೋರ್ಟ್ ನ್ಯಾಯಮೂರ್ತಿ ಹೆಸರಿನಲ್ಲಿ ವಂಚನೆ: ನಕಲಿ ನೇಮಕಾತಿ ಮಾಡುವುದಾಗಿ ಲಕ್ಷಾಂತರ ರೂ. ವಂಚನೆ- ಎರಡನೇ ಆರೋಪಿ ಮಹಿಳೆ ಪೊಲೀಸ್ ಬಲೆಗೆ
ಹೈಕೋರ್ಟ್ ನ್ಯಾಯಮೂರ್ತಿ ಹೆಸರಿನಲ್ಲಿ ಇತ್ತೀಚೆಗೆ ಏಳು ಮಂದಿ ಉದ್ಯೋಗ ಆಕಾಂಕ್ಷಿಗಳಿಗೆ ನಕಲಿ ನೇಮಕಾತಿ ಪತ್ರ ನೀಡಿ ಲಕ್ಷಾಂತರ ರೂ. ವಂಚಿಸಿದ್ದ ಆರೋಪದಡಿ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕೊಪ್ಪಳ ಮೂಲದ ವಿಜಯಾ ಹಿರೇಮಠ ಬಂಧಿತ ಆರೋಪಿ. ಈ ಮಹಿಳೆ ಸುಮಾರು ಏಳು ಮಂದಿಗೆ 48 ಲಕ್ಷ ರೂ. ವಂಚಿಸಿದ್ದರು. 2024ರ ಸೆಪ್ಟೆಂಬರ್ 3ರಂದು ಸಿಸಿಬಿ ಪೊಲೀಸ್ ಠಾಣೆಯಲ್ಲಿ ಆರ್. ಟಿ. ನಗರ ನಿವಾಸಿ ಅಬ್ದುಲ್ ರಜಾಕ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿತ್ತು.
ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮೊದಲ ಆರೋಪಿ ಸಿದ್ದಲಿಂಗಯ್ಯ ಹಿರೇಮಠ ಅವರನ್ನು ಬಂಧಿಸಿದ್ದರು. ತಲೆಮರೆಸಿಕೊಂಡಿದ್ದ ವಿಜಯಾ ಹಿರೇಮಠ ಇದೀಗ ಎರಡನೇ ಆರೋಪಿಯಾಗಿ ಬಂಧನಕ್ಕೊಳಗಾಗಿದ್ಧಾರೆ.
ಸಿದ್ದಲಿಂಗಯ್ಯ ಹಿರೇಮರ್‌ನ ವಂಚನೆ ಕೃತ್ಯಕ್ಕೆ ವಿಜಯಾ ಸಹಕಾರ ನೀಡುತ್ತಿದ್ದರು. ಈಕೆ ಕೊಪ್ಪಳ ನಗರಸಭೆ ಮಾಜಿ ಸದಸ್ಯೆ ಎಂದು ಹೇಳಲಾಗಿದೆ.
ಕೊಪ್ಪಳದ ಸಿದ್ದಲಿಂಗಯ್ಯ ಹಿರೇಮಠ, ನಗರದ ಸಹಕಾರ ನಗರದಲ್ಲಿ ವಾಸಿಸುತ್ತಿದ್ದರು. ತನಗೆ ನ್ಯಾಯಮೂರ್ತಿಗಳ ನೇರ ಪರಿಚಯವಿದ್ದು, ನೇಮಕಾತಿ ಮೂಲಕ ನ್ಯಾಯಾಲಯದಲ್ಲಿ ಕೆಳ ಹಂತದ ಹುದ್ದೆಗಳನ್ನು ಕೊಡಿಸುವುದಾಗಿ ನಂಬಿಸಿ ಉದ್ಯೋಗ ಆಕಾಂಕ್ಷಿಗಳಿಂದ ಹಣ ಪಡೆದು ವಂಚಿಸಿದ್ದರು ಎಂದು ಆರೋಪಿಸಲಾಗಿದೆ. ಬಂಧಿತರೆಲ್ಲರನ್ನೂ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.