-->
ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ 708 ಹುದ್ದೆಗಳಿಗೆ ನೇಮಕಾತಿ: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ 708 ಹುದ್ದೆಗಳಿಗೆ ನೇಮಕಾತಿ: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ 708 ಹುದ್ದೆಗಳಿಗೆ ನೇಮಕಾತಿ: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ





ಕರ್ನಾಟಕ ರಾಜ್ಯದ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 708 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.


ಬೆಂಗಳೂರು ಅಭಿವೃದ್ಧಿಪ್ರಾಧಿಕಾರ, ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಕಾರ್ಖಾನೆ, ರಾಜೀವ್ ಗಾಂಧಿ ಆರೋಗ್ಯ ವಿವಿ ಸೇರಿದಂತೆ 8 ವಿವಿಧ ಸರಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 708 ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಆಸಕ್ತ ಅಭ್ಯರ್ಥಿಗಳು 2025ರ ಅಕ್ಟೋಬರ್ 9ರಿಂದ ನವೆಂಬರ್ 11ರವರೆಗೆ ಅರ್ಜಿ ಸಲ್ಲಿಸಬಹುದು. ಶಾರ್ಟ್‌ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಒಎಂಆರ್ ಆಧಾರಿತ ಪರೀಕ್ಷೆ ನಡೆಯಲಿದೆ. ಈ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕ ಮಾಡಲಾಗುತ್ತದೆ.


ಋಣಾತ್ಮಕ ಮೌಲ್ಯಮಾಪನ ಇರಲಿದ್ದು, ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದರಷ್ಟು (1/4) ಅಂಕ ಕಡಿತ ಮಾಡಲಾಗುತ್ತದೆ.


ಒಂದೇ ಪಠ್ಯಕ್ರಮ ಇರುವ ವಿವಿಧ ಇಲಾಖೆಗಳ ಹುದ್ದೆಗಳಿಗೆ ಒಂದೇ ಪರೀಕ್ಷೆ ನಡೆಸಿ ಸಂಬಂಧಪಟ್ಟ ಇಲಾಖೆಗಳಿಗೆ ಮೆರಿಟ್ ಪಟ್ಟಿ ನೀಡಲಾಗುವುದು. ಪರೀಕ್ಷಾ ದಿನಾಂಕವನ್ನು ನಂತರದ ದಿನಗಳಲ್ಲಿ ತಿಳಿಸಲಾಗುವುದು.


ಆಸಕ್ತರು ಈಗಿನಿಂದಲೇ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವುದು ಉತ್ತಮ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.


ಹೆಚ್ಚಿನ ವಿವರಗಳಿಗೆ cetonline. Karnataka.gov.in/kea/ ಗೆ ಭೇಟಿ ನೀಡಬಹುದು.


Ads on article

Advertise in articles 1

advertising articles 2

Advertise under the article