ಕನ್ನಡ ಸಾಹಿತ್ಯ ಪರಿಷತ್‌ಗೆ ಆಡಳಿತಾಧಿಕಾರಿ: ಮಹೇಶ್ ಜೋಶಿ ವಿರುದ್ಧದ ಆರೋಪಗಳ ವಿಚಾರಣೆ
ಕನ್ನಡ ಸಾಹಿತ್ಯ ಪರಿಷತ್‌ಗೆ ಆಡಳಿತಾಧಿಕಾರಿ: ಮಹೇಶ್ ಜೋಶಿ ವಿರುದ್ಧದ ಆರೋಪಗಳ ವಿಚಾರಣೆ
ಪ್ರತಿಷ್ಟಿತ ಕನ್ನಡ ಸಾಹಿತ್ಯ ಪರಿಷತ್‌ಗೆ ಆಡಳಿತಾಧಿಕಾರಿಯನ್ನು ನೇಮಿಸಲಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ. ಗಾಯತ್ರಿ ಅವರು ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಇದೇ ವೇಳೆ, ನಿರ್ಗಮಿತ(ನಿಕಟಪೂರ್ವ) ಅಧ್ಯಕ್ಷ ಮಹೇಶ್ ಜೋಶಿ ಅವರ ವಿರುದ್ಧ ಮಾಡಲಾದ ಅಧಿಕಾರ ದುರುಪಯೋಗ ಮತ್ತು ಹಣಕಾಸು ದುರ್ಬಳಕೆ ಆರೋಪಗಳ ವಿಚಾರಣೆ ನಡೆಸಲು ಪ್ರಕ್ರಿಯೆ ಆರಂಭವಾಗಿದೆ.
ನೇಮಕಾತಿ ಆದೇಶಕ್ಕೆ ತಡೆ ಕೋರಿ ಮಹೇಶ್ ಜೋಶಿ ಅವರು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ರಾಜ್ಯ ಸರ್ಕಾರವು ಆಡಳಿತಾಧಿಕಾರಿ ನೇಮಕದ ಬಗ್ಗೆ ಅಗತ್ಯವಾದ ಸೂಕ್ತ ದಾಖಲೆಗಳನ್ನು ಸಲ್ಲಿಸಿತ್ತು.
ಸದ್ರಿ ನೇಮಕಾತಿ ಆದೇಶ ಹೊರಡಿಸಿದ ದಿನಾಂಕದಿಂದ ಮೂರು ತಿಂಗಳು ಅಥವಾ ವಿಚಾರಣೆ ಪೂರ್ಣಗೊಳ್ಳುವ ವರೆಗೆ ಈ ನೇಮಕಾತಿ ಜಾರಿಯಲ್ಲಿ ಇರುತ್ತದೆ.
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅಧಿಕಾರ ದುರುಪಯೋಗ ಮತ್ತು ಹಣಕಾಸು ದುರ್ಬಳಕೆ ಸೇರಿದಂತೆ 17 ಆರೋಪಗಳನ್ನು ಮಾಡಲಾಗಿದ್ದು, ಈ ಬಗ್ಗೆ ಮಹೇಶ್ ಜೋಷಿ ವಿರುದ್ಧ ಮಾಡಲಾದ ಆರೋಪಗಳ ಬಗ್ಗೆ ವಿಚಾರಣೆ ನಡೆಲಿದೆ.
ಜೋಷಿ ವಿರುದ್ಧದ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿರುವುದರಿಂದ ಆಡಳಿತಾಧಿಕಾರಿಯನ್ನು ಏಕೆ ನೇಮಿಸಬಾರದು ಎಂದು ನೋಟೀಸ್ ಜಾರಿಗೊಳಿಸಲಾಗಿತ್ತು. ನಿಗದಿತ ಕಾಲಾವಧಿಯಲ್ಲಿ ಜೋಷಿ ಹಾಜರಾಗದಿರುವುದು ಮತ್ತು ಅಗತ್ಯ ದಾಖಲಾತಿಗಳನ್ನು ಒದಗಿಸದಿರುವ ಕಾರಣ ಆಡಳಿತಾಧಿಕಾರಿ ನೇಮಕ ಮಾಡುವಂತೆ ಇಲಾಖೆ ಶಿಫಾರಸ್ಸು ಮಾಡಿತ್ತು.