-->
ಗುತ್ತಿಗೆ ನೌಕರರ ನೇಮಕ ಕಾಯಂಗೆ ಸುಪ್ರೀಂ ಕೋರ್ಟ್ ಆದೇಶ: ಎಸ್ಕಾಂ, ಕೆಪಿಟಿಸಿಎಲ್‌ನಲ್ಲಿ ಪ್ರಕ್ರಿಯೆ ಚುರುಕು

ಗುತ್ತಿಗೆ ನೌಕರರ ನೇಮಕ ಕಾಯಂಗೆ ಸುಪ್ರೀಂ ಕೋರ್ಟ್ ಆದೇಶ: ಎಸ್ಕಾಂ, ಕೆಪಿಟಿಸಿಎಲ್‌ನಲ್ಲಿ ಪ್ರಕ್ರಿಯೆ ಚುರುಕು

ಗುತ್ತಿಗೆ ನೌಕರರ ನೇಮಕ ಕಾಯಂಗೆ ಸುಪ್ರೀಂ ಕೋರ್ಟ್ ಆದೇಶ: ಎಸ್ಕಾಂ, ಕೆಪಿಟಿಸಿಎಲ್‌ನಲ್ಲಿ ಪ್ರಕ್ರಿಯೆ ಚುರುಕು

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ (ಎಸ್ಕಾಂ) ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ನೌಕರರನ್ನು ಕಾಯಂಗೊಳಿಸುವ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

"ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವ ನೌಕರರು ವಂಚನೆಗೀಡಾಗಬಾರದು. ಅವರನ್ನು ಸರಕಾರಗಳು ಶೋಷಿಸಬಾರದು,'' ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಹಾಗಾಗಿ, ರಾಜ್ಯ ಸರಕಾರವು ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಸುಮಾರು 15-20 ವರ್ಷಗಳಿಂದ 13 ಸಾವಿರ ನೌಕರರನ್ನು ಕಾಯಂಗೊಳಿಸಲು ಚಿಂತನೆ ನಡೆಸಿದೆ.

ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ನೌಕರರನ್ನು ಕಾಯಂಗೊಳಿಸುವುದು ಅಥವಾ ಅವರನ್ನು ಒಳಗುತ್ತಿಗೆಗೆ ಸೇರಿಸಿಕೊಳ್ಳುವುದು ರಾಜ್ಯ ಸರಕಾರದ ಚಿಂತನೆಯಾಗಿದೆ.

ರಾಜ್ಯ ಸರಕಾರವು ಸುಪ್ರೀಂ ಕೋರ್ಟ್ ಆದೇಶದಂತೆ ಕಾಯಂಗೊಳಿಸುವ ಕುರಿತು ಅಧಿಕೃತ ಆದೇಶ ಹೊರಡಿಸಿದರೆ, ರಾಜ್ಯದ 13 ಸಾವಿರಕ್ಕೂ ಅಧಿಕ ನೌಕರರು ಹೆಚ್ಚಿನ ಸಂಬಳ ಸೇರಿ ವಿವಿಧ ಸೌಲಭ್ಯಗಳನ್ನು ಪಡೆಯಲಿದ್ದಾರೆ.

Ads on article

Advertise in articles 1

advertising articles 2

Advertise under the article