
SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ತೇರ್ಗಡೆ ಅಂಕವನ್ನು ಪರಿಷ್ಕರಿಸಿದ ರಾಜ್ಯ ಸರ್ಕಾರ
SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ತೇರ್ಗಡೆ ಅಂಕವನ್ನು ಪರಿಷ್ಕರಿಸಿದ ರಾಜ್ಯ ಸರ್ಕಾರ
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ವರ್ಷದಿಂದ ಪಾಸ್ ಆಗಲು ತೇರ್ಗಡೆ ಅಂಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿ ಆದೇಶ ಹೊರಡಿಸಿದೆ.
"ಅಂಕ ಮರು ನಿಗದಿ ಬಗ್ಗೆ ಆಕ್ಷೇಪಣೆಗೆ ಅರ್ಜಿ ಆಹ್ವಾನಿಸಿದಾಗ ಶೇ.33 ಅಂಕಗಳ ಪರವಾಗಿ 701 ಹಾಗೂ ವಿರೋಧವಾಗಿ ಕೇವಲ 8 ಅರ್ಜಿಗಳು ಸಲ್ಲಿಕೆಯಾಗಿದ್ದವು. ಇದರ ಆಧಾರದ ಮೇಲೆ ಉತ್ತೀರ್ಣಕ್ಕೆ 35 ಅಂಕಗಳ ಬದಲಾಗಿ 33 ಅಂಕಗಳನ್ನು ನಿಗದಿ ಮಾಡಲಾಗಿದೆ'' ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಮಧು ಬಂಗಾರಪ್ಪ ಮಾಹಿತಿ ನೀಡಿದರು.
ಈ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತೇರ್ಗಡೆಗೆ ಸರಾಸರಿ ಶೇಕಡಾ 33ರಷ್ಟು ಅಂಕ ಗಳಿಸಿದರೆ ಸಾಕು. ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
# ಪ್ರತಿ ಸಬ್ಜೆಕ್ಟ್‌ನಲ್ಲಿ ಕನಿಷ್ಠ 30 ಅಂಕ ಪಡೆಯಬೇಕು. ಆದರೆ, ಸರಾಸರಿ ಶೇಕಡಾ 33 ಅಂಕ ಗಳಿಸಬೇಕು
# ಲಿಖಿತ ಪರೀಕ್ಷೆಯಲ್ಲಿ ಗರಿಷ್ಟ 80 ಅಂಕಗಳಲ್ಲಿ ಕನಿಷ್ಠ 24 ಅಂಕ ಪಡೆಯಬೇಕು.
# ಲಿಖಿತ ಪರೀಕ್ಷೆಯಲ್ಲಿ 80ಕ್ಕೆ 15 ಅಂಕ ಗಳಿಸಿದ ವಿದ್ಯಾರ್ಥಿ ಆಂತರಿಕ ಮೌಲ್ಯಮಾಪನದಲ್ಲಿ 20 ಅಂಕ ಪಡೆದಿದ್ದರೂ ಪಾಸ್
# ಎಸ್ಸೆಸ್ಸೆಲ್ಸಿಯಲ್ಲಿ 625ಕ್ಕೆ 206, ಪಿಯುಸಿಯಲ್ಲಿ 600ಕ್ಕೆ 198 ಅಂಕ ಪಡೆಯಬೇಕು.
"ಎಸ್ಸೆಸ್ಸೆಲ್ಸಿಯಲ್ಲಿ ವಿದ್ಯಾರ್ಥಿಗಳು ಪಾಸಾಗಲು 625 ಅಂಕಗಳಿಗೆ 206 ಅಂಕಗಳನ್ನು ತೆಗೆದುಕೊಳ್ಳಬೇಕು. ಅದೇ ರೀತಿ ಆಯಾ ವಿಷಯದ ಒಟ್ಟು ಅಂಕಗಳಲ್ಲಿ ಕನಿಷ್ಠ ಶೇ.30 ಅಂಕಗಳನ್ನು ಪಡೆದಲ್ಲಿ ಅಂತಹ ವಿದ್ಯಾರ್ಥಿ ಯನ್ನು ಉತ್ತೀರ್ಣ ಎಂದು ಘೋಷಿಸಲಾಗುತ್ತದೆ. ಅದೇ ರೀತಿ ದ್ವಿತೀಯ ಪಿಯುಸಿಯಲ್ಲಿ 600 ಅಂಕಗಳಿಗೆ 198 ಅಂಕಗಳನ್ನು ಪಡೆಯಬೇಕು. ಪ್ರತಿ ವಿಷಯದಲ್ಲಿ ಕನಿಷ್ಠ ಶೇ.30 ಅಂಕ ಪಡೆಯಬೇಕು. ಇನ್ನು, ಆಂತರಿಕ ವಿಷಯದಲ್ಲಿ 80 ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ 24 ಅಂಕಗಳನ್ನು ಪಡೆಯಬೇಕು,'' ಎಂದು ಅವರು ಸ್ಪಷ್ಟಪಡಿಸಿದರು.
"ಸಿಬಿಎಸ್‌ಇ ಮತ್ತು ನೆರೆ ರಾಜ್ಯಗಳ ಮಾದರಿಯಲ್ಲಿ ರಾಜ್ಯದಲ್ಲಿಯೂ ಉತ್ತೀರ್ಣ ಅಂಕಗಳನ್ನು ಶೇಕಡಾ 33ಕ್ಕೆ ಇಳಿಸಲು ಮೊದಲಿನಿಂದಲೂ ಒತ್ತಾಯ ಕೇಳಿ ಬಂದಿತ್ತು. ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ 4ನೇ ವರದಿಯಲ್ಲಿಯೂ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಉತ್ತೀರ್ಣ ಅಂಕಗಳನ್ನು ಕಡಿಮೆ ಮಾಡಲು ಶಿಫಾರಸು ಮಾಡಿತ್ತು. ಈ ಹಿನ್ನೆಲೆಯಲ್ಲಿ ಕನಿಷ್ಠ ಅಂಕಗಳು ಮುಂಬರುವ ಮಾರ್ಚ್- ಏಪ್ರಿಲ್‌ನಲ್ಲಿ ನಡೆಯಲಿರುವ ಪರೀಕ್ಷೆಗೆ ಅನ್ವಯವಾಗಲಿವೆ. ಈ ನಿಯಮವು ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಪುನರಾವರ್ತಿತ ಮತ್ತು ಖಾಸಗಿ ಅಭ್ಯರ್ಥಿಗಳಿಗೂ ಅನ್ವಯವಾಗಲಿದೆ'' ಎಂದು ತಿಳಿಸಿದರು.
'ಪ್ರಸ್ತುತ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಕನಿಷ್ಠ ಶೇ.35 ಅಂಕಗಳನ್ನು ಪಡೆಯಬೇಕು ಎಂಬ ನಿಯಮವಿದೆ.
ಈ ಕ್ರಮ ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣವನ್ನು ಹೆಚ್ಚಿಸುವ ದೃಷ್ಟಿಯಿಂದ ಮತ್ತು ಸಿಬಿಎಸ್‌ಸಿ ಹಾಗೂ ನೆರೆ ರಾಜ್ಯಗಳ ಉತ್ತೀರ್ಣ ಮಾನದಂಡವನ್ನು ವನ್ನು ಅನುಸರಿಸಿ ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೂ ಅನ್ವಯವಾಗಲಿದೆ.