-->
ವಕ್ಫ್ ಮಂಡಳಿಗೆ ಮದುವೆ ಪ್ರಮಾಣಪತ್ರ ನೀಡುವ ಅಧಿಕಾರ: ವಿವಾದಿತ ಆದೇಶ ಹಿಂಪಡೆದ ರಾಜ್ಯ ಸರ್ಕಾರ

ವಕ್ಫ್ ಮಂಡಳಿಗೆ ಮದುವೆ ಪ್ರಮಾಣಪತ್ರ ನೀಡುವ ಅಧಿಕಾರ: ವಿವಾದಿತ ಆದೇಶ ಹಿಂಪಡೆದ ರಾಜ್ಯ ಸರ್ಕಾರ

ವಕ್ಫ್ ಮಂಡಳಿಗೆ ಮದುವೆ ಪ್ರಮಾಣಪತ್ರ ನೀಡುವ ಅಧಿಕಾರ: ವಿವಾದಿತ ಆದೇಶ ಹಿಂಪಡೆದ ರಾಜ್ಯ ಸರ್ಕಾರ





ವಕ್ಫ್ ಮಂಡಳಿಗೆ ಮುಸ್ಲಿಮರ ವಿವಾಹ ನೋಂದಣಿ ಮಾಡಿ 'ಮದುವೆ ಪ್ರಮಾಣಪತ್ರ' ನೀಡುವ ಅಧಿಕಾರಕ್ಕೆ ಸಂಬಂಧಿಸಿದಂತೆ ನೀಡಲಾಗಿದ್ದ ವಿವಾದಿತ ಆದೇಶವನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆದುಕೊಂಡಿದೆ.


ಮುಸ್ಲಿಂ ಸಮುದಾಯದ ವಿವಾಹಿತ ದಂಪತಿಗೆ ವಿವಾಹ ನೋಂದಣಿ ಮತ್ತು ವಿವಾಹ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ರಾಜ್ಯವಕ್ಸ್ ಮಂಡಳಿಗೆ ನೀಡಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಮೂಲಕ ರಾಜ್ಯ ಸರ್ಕಾರ 30-08-2023ರಂದು ಹೊರಡಿಸಲಾಗಿತ್ತು.


ಈ ಆದೇಶವನ್ನು ಪ್ರಶ್ನಿಸಿ ಬೆಂಗಳೂರಿನ ಎ ಆಲಂ ಪಾಷಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿಸಿ ಎಂ ಪೂಣಚ್ಚ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.


ಸರ್ಕಾರದ ಪರ ವಕೀಲೆ ನಿಲೋಫರ್ ಅಕ್ಟರ್ ಅವರು ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿ, 'ಮುಸ್ಲಿಂ ಸಮುದಾಯದ ವಿವಾಹ ನೋಂದಣಿ ಹಾಗೂ ವಿವಾಹಿತ ಮುಸ್ಲಿಂ ದಂಪತಿಗೆ ವಿವಾಹ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ರಾಜ್ಯ ವಕ್ಸ್ ಮಂಡಳಿಗೆ ನೀಡಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಮೂಲಕ ರಾಜ್ಯ ಸರ್ಕಾರ 2023ರ ಆಗಸ್ಟ್ 30ರಂದು ಹೊರಡಿಸಿದ್ದ ಆದೇಶ ಹಿಂಪಡೆಯಲಾಗಿದೆ ಎಂದು ಮಾನ್ಯ ನ್ಯಾಯಪೀಠಕ್ಕೆ ತಿಳಿಸಿದರು. ಸರ್ಕಾರದ ಹೇಳಿಕೆಯನ್ನು ದಾಖಲಿಸಿಕೊಂಡ ಪೀಠ ಅರ್ಜಿಯನ್ನು ಇತ್ಯರ್ಥಪಡಿಸಿ ಆದೇಶಿಸಿತು.


2024ರ ನವೆಂಬರ್ 21ಕ್ಕೆ ಹೈಕೋರ್ಟ್ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿತ್ತು. ವಕ್ಸ್ ಕಾಯಿದೆ-1995ರ ಅನ್ವಯ ವಕ್ಸ್ ಆಸ್ತಿಗಳ ಸಂರಕ್ಷಣೆ ಮತ್ತು ನಿರ್ವಹಣೆಗೆ ಮಾಡುವುದು ವಕ್ಸ್ 'ಮಂಡಳಿ ಕಾರ್ಯವ್ಯಾಪ್ತಿ ಆಗಿದೆ. ಕರ್ನಾಟಕ ವಿವಾಹ ನೋಂದಣಿ ಕಾಯಿದೆ-1976ರ ಪ್ರಕಾರ ವಿವಾಹ ನೋಂದಣಿ ಅಧಿಕಾರ ಇರುವುದು ಉಪ ನೋಂದಣಾಧಿಕಾರಿಗೆ. ಮುಸ್ಲಿಮರಿಗೆ ವಿವಾಹ ನೋಂದಣಿ ಪ್ರಮಾಣ ಪತ್ರ ವಿತರಿಸುವ ಸಂಬಂಧ 2009ರಲ್ಲಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ 2011ರಲ್ಲಿ ರದ್ದುಪಡಿಸಿದೆ. ಇದಾದ ಬಳಿಕ ಸರ್ಕಾರ ಪರಿಷ್ಕೃತ ಆದೇಶಗಳನ್ನು ಹೊರಡಿಸಿದೆ.


ಈಗಾಗಲೇ ಉಪ ನೋಂದಣಾಧಿಕಾರಿಗಳ ಬಳಿ ವಿವಾಹ ನೋಂದಣಿಗೆ ಅವಕಾಶವಿದೆ. ಅಲ್ಲದೇ ಸ್ಥಳೀಯ ಖಾಜಿಗಳ ಬಳಿಯೂ ವಿವಾಹ ದಾಖಲೆ ಇರಲಿದೆ. ಅದಾಗ್ಯೂ ವಿವಾಹ ನೋಂದಣಿ ಮತ್ತು ವಿವಾಹ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ವಕ್ಸ್ ಮಂಡಳಿಗೆ ನೀಡುವ ಮೂಲಕ ಮೂರನೇ ವ್ಯವಸ್ಥೆಯೊಂದನ್ನು ಹುಟ್ಟು ಹಾಕಲಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿತ್ತು.


ಆದ್ದರಿಂದ, ಮುಸ್ಲಿಂ ಸಮುದಾಯದ ವಿವಾಹಿತ ದಂಪತಿಗೆ ವಿವಾಹ ನೋಂದಣಿ ಮತ್ತು ವಿವಾಹ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ರಾಜ್ಯ ವಕ್ಸ್ ಮಂಡಳಿಗೆ ನೀಡಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಮೂಲಕ ರಾಜ್ಯ ಸರ್ಕಾರ 2023ರ ಆಗಸ್ಟ್ 30ರಂದು ಹೊರಡಿಸಿರುವ ಆದೇಶ ವಕ್ಸ್ ಕಾಯಿದೆ-1995 ಹಾಗೂ ಸಂವಿಧಾನದ 14ನೇ ವಿಧಿಗೆ ತದ್ದಿರುದ್ಧವಾಗಿದೆ. ಈ ಆದೇಶ ರದ್ದುಪಡಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದರು.


Ads on article

Advertise in articles 1

advertising articles 2

Advertise under the article