ಕರ್ನಾಟಕ ರಾಜ್ಯ ವಕೀಲರ ಪರಿಷತ್ ಚುನಾವಣೆಗೆ ಮುಹೂರ್ತ ಫಿಕ್ಸ್: ವೇಳಾಪಟ್ಟಿ ನಿಗದಿಪಡಿಸಿದ ಸುಪ್ರೀಂ ಕೋರ್ಟ್
ಕರ್ನಾಟಕ ರಾಜ್ಯ ವಕೀಲರ ಪರಿಷತ್ ಚುನಾವಣೆಗೆ ಮುಹೂರ್ತ ಫಿಕ್ಸ್: ವೇಳಾಪಟ್ಟಿ ನಿಗದಿಪಡಿಸಿದ ಸುಪ್ರೀಂ ಕೋರ್ಟ್
ಅಂತೂ ಇಂತೂ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಕೆಎಸ್‌ಬಿಸಿ ಸಹಿತ ದೇಶದ ವಿವಿಧ ರಾಜ್ಯ ವಕೀಲ ಪರಿಷತ್‌ಗಳಿಗೆ ಸುಪ್ರೀಂ ಕೋರ್ಟ್ ವೇಳಾಪಟ್ಟಿ ನಿಗದಿಪಡಿಸಿದೆ.
ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಉಜ್ಜಲ್ ಭುಯಾನ್ ಮತ್ತು ಎನ್.ಕೆ. ಸಿಂಗ್ ಅವರಿದ್ದ ನ್ಯಾಯಪೀಠ "ಎಂ. ವರದನ್ ಮತ್ತು ಭಾರತ ಸರ್ಕಾರ" ಪ್ರಕರಣದಲ್ಲಿ ಈ ಆದೇಶ ಹೊರಡಿಸಿದೆ.
ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ವಕೀಲರ ಪರಿಷತ್‌ಗಳ ಚುನಾವಣೆ ವಿಳಂಬ ಆಗಿರುವುದಕ್ಕೆ ಸುಪ್ರೀಂ ಕೋರ್ಟ್ ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
ಐದು ಹಂತಗಳ ಚುನಾವಣೆಗೆ ವೇಳಾಪಟ್ಟಿ ನಿಗದಿಪಡಿಸಿದ ಸುಪ್ರೀಂ ಕೋರ್ಟ್, ನಾಲ್ಕನೇ ಹಂತದಲ್ಲಿ ಕರ್ನಾಟಕ, ಗುಜರಾತ್ ಮತ್ತು ಪಂಜಾಬ್-ಹರಿಯಾಣ ರಾಜ್ಯಗಳ ಚುನಾವಣೆಗಳು ಮಾರ್ಚ್ 15, 2026ರ ಒಳಗೆ ಪೂರ್ಣಗೊಳ್ಳಬೇಕು ಎಂದು ವೇಳಾಪಟ್ಟಿಯಲ್ಲಿ ನಿಗದಿಪಡಿಸಲಾಗಿದೆ.
ಮೊದಲ ಹಂತದಲ್ಲಿ ಉತ್ತರ ಪ್ರದೇಶ ತೆಲಂಗಾಣದಲ್ಲಿ ಚುನಾವಣೆ ನಡೆಯಲಿದ್ದು, ಈ ಚುನಾವಣೆ 2026ರ ಜನವರಿ 31ರೊಳಗೆ ನಡೆಯಲಿದೆ.
ಎರಡನೇ ಹಂತದಲ್ಲಿ ಆಂಧ್ರ ಪ್ರದೇಶ, ದೆಹಲಿ ಮತ್ತು ಪುದುಚೇರಿಯಲ್ಲಿ ಫ್ರೆಬ್ರವರಿ ಅಂತ್ಯದೊಳಗೆ ನಡೆಯಲಿದೆ. ಮಾರ್ಚ್ ಕೊನೆಯ ಒಳಗೆ ಕರ್ನಾಟಕ ಸಹಿತ ಮೂರು ರಾಜ್ಯಗಳು ಚುನಾವಣೆ ಎದುರಿಸಲಿವೆ.
ಎಲ್ಲ ಚುನಾವಣೆಗಳು ಆಯಾ ರಾಜ್ಯದ ಉನ್ನತ ಅಧಿಕಾರ ಸಮಿತಿಗಳ ಮೇಲ್ವಿಚಾರಣೆಯಲ್ಲಿ ಎಣಿಕೆ ಕಾರ್ಯ ನಡೆಯಬೇಕು. ಪ್ರಾದೇಶಿಕ ಸಮಿತಿಯ ನಿರ್ಧಾರಕ್ಕೆ ಆಕ್ಷೇಪ ಇದ್ದರೆ ರಾಷ್ಟ್ರೀಯ ಉನ್ನತ ಅಧಿಕಾರ ಮೇಲ್ವಿಚಾರಣಾ ಸಮಿತಿಯನ್ನು ಸಂಪರ್ಕಿಸಬಹುದು. ಈ ಸಮಿತಿಯ ನಿರ್ಧಾರವೇ ಅಂತಿಮ. ಇದನ್ನು ಪ್ರಶ್ನಿಸುವ ಅರ್ಜಿಗಳನ್ನು ಸಿವಿಲ್ ನ್ಯಾಯಾಲಯಗಳು ಮತ್ತು ಹೈಕೊರ್ಟ್‌ಗಳು ಸ್ವೀಕರಿಸಬಾರದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.